ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಆನ್‌ಲೈನ್ ಶಿಕ್ಷಣದ ಬಗ್ಗೆ ಬುಧವಾರ ತೀರ್ಮಾನ; ಎಸ್.ಸುರೇಶ್ ಕುಮಾರ್
ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು ಹೊಂದಿಲ್ಲ. ಈ ಬಗ್ಗೆ ಯಾವುದೇ ಪೋಷಕರು ಅನವಶ್ಯಕವಾಗಿ ಗೊಂದಲಕ್ಕೆ ಒಳಗಾಗುವುದು ಬೇಡ. ರಾಜ್ಯದಲ್ಲಿ ಶಾಲಾರಂಭ ಕುರಿತಂತೆ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಸಹ ಚರ್ಚಿಸಿ ಸಹಮತವನ್ನು ಪಡೆಯಲಾಗುವುದು ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಾಲಾ ಅರಂಭದ ಕುರಿತಂತೆ ವಿವಿಧ ರಾಜ್ಯಗಳ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲದಯ ವಿಡಿಯೋ ಸಂವಾದ ನಡೆಸಿ ಎಲ್ಲ ರಾಜ್ಯಗಳ ಅಭಿಪ್ರಾಯ ಸಂಗ್ರಹವನ್ನು ಮಾಡಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರೂ ಸಹ ಆಗಸ್ಟ್ 15ರ ಬಳಿಕವಷ್ಟೇ ಶಾಲಾರಂಭದ ದಿನಾಂಕವನ್ನು ನಿಗದಿಪಡಿಸಲಾಗುವುದೆಂಬ ಸುಳಿವು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಶಿಕ್ಷಣ ಇಲಾಖೆಯು ನಮ್ಮ ರಾಜ್ಯದಲ್ಲಿ ಶಾಲಾರಂಭದ ಕುರಿತು ಪೋಷಕರ ಅಭಿಪ್ರಾಯವನ್ನು ಸಂಗ್ರಹಿಸಲು ಜೂನ್ 10, 12 ಮತ್ತು 12ರಂದು ಪೋಷಕರ/ ಎಸ್ ಡಿಎಂಸಿ / ಎಸ್ ಎಂಸಿ ಸಭೆಗಳನ್ನು ನಡೆಸಿ ಕ್ರಮ ವಹಿಸಲು ನೀಡಲಾಗಿದ್ದ ಸೂಚನೆಯನ್ನು ಜೂನ್ 20ರವರೆಗೆ ವಿಸ್ತರಿಸಲು ಇಂದಿನ ಸಭೆಯು ನಿರ್ಣಯಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


