ಪ್ರವಾಸಿಗರು ಗಮ್ಯಸ್ಥಾನದ ವಿವರಗಳನ್ನು ಸಲ್ಲಿಸುವುದು ಕಡ್ಡಾಯ!
ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರು ತಮ್ಮ ಗಮ್ಯಸ್ಥಾನ, ಉದ್ದೇಶ ಮತ್ತು ರಸ್ತೆ ಮಾರ್ಗಗಳನ್ನು ಸ್ಪಷ್ಟವಾಗಿ ತಿಳಿಸುವ ಘೋಷಣೆ ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ.

ಬೆಂಗಳೂರು: ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರು ತಮ್ಮ ಗಮ್ಯಸ್ಥಾನ, ಉದ್ದೇಶ ಮತ್ತು ರಸ್ತೆ ಮಾರ್ಗಗಳನ್ನು ಸ್ಪಷ್ಟವಾಗಿ ತಿಳಿಸುವ ಘೋಷಣೆ ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ.
ರಸ್ತೆಯ ಮೂಲಕ ಪ್ರಯಾಣಿಸುವವರು ರಸ್ತೆ ಮಾರ್ಗಗಳನ್ನು ಸ್ಪಷ್ಟವಾಗಿ ಪಟ್ಟಿ ಮಾಡಬೇಕಾಗುತ್ತದೆ. ಪ್ರವಾಸೋದ್ಯಮ ಇಲಾಖೆಯು ಇವುಗಳನ್ನು ಕಡ್ಡಾಯಗೊಳಿಸಿದೆ. ಇದರಿಂದ ಪ್ರವಾಸಿಗರು ಎಲ್ಲಿಂದ ಬಂದಿದ್ದಾರೆ ಎಂಬುದನ್ನು ಕಂಡುಹಿಡಿಯಲು ಮತ್ತು ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲು ಸಾಧ್ಯವಾಗುತ್ತದೆ.
ಹೊರ ರಾಜ್ಯಗಳಿಂದ ಬರುವ ಜನರೊಂದಿಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ನವೀಕರಿಸುವ ಅವಶ್ಯಕತೆಯಿದೆ. ಆದ್ದರಿಂದ ನಾವು ಮಾರ್ಗಗಳನ್ನು ಭರ್ತಿ ಮಾಡಲು ಪ್ರವಾಸಿಗರನ್ನು ಕೇಳುತ್ತಿದ್ದೇವೆ. ಅವರು ಯಾವುದೇ ಕಂಟೈನ್ಮೆಂಟ್ ಜೋನ್ ಗಳನ್ನು ದಾಟಿದ್ದಾರೆಯೇ ಎಂದು ತಿಳಿಯಲು ಇದು ಒಂದು ವಿಧಾನವಾಗಿದೆ. ಇನ್ನು ಪ್ರವಾಸಿಗರು ಅನಾರೋಗ್ಯಕ್ಕೆ ಒಳಗಾಗಿದ್ದರೆ ಅವರನ್ನು ಸಂಪರ್ಕಿಸಲು ಅಥವಾ ಪತ್ತೆಹಚ್ಚಲು ಅಧಿಕಾರಿಗಳಿಗೆ ಸಹಾಯಕವಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು. ಪ್ರವಾಸಿಗರು ಸ್ವಯಂ ಘೋಷಣೆ ಪತ್ರವನ್ನು ಅಪ್‌ಲೋಡ್ ಮಾಡಬೇಕು. ಇದನ್ನು ರಾಜ್ಯ ಸರ್ಕಾರವೂ ಅನುಮೋದಿಸುತ್ತದೆ. ಮತ್ತು ಪ್ರವಾಸೋದ್ಯಮ ಇಲಾಖೆಯು ಇದನ್ನು ಆನ್‌ಲೈನ್‌ನಲ್ಲಿ ಹಾಕುತ್ತದೆ.
ಹೋಟೆಲ್‌ಗಳಲ್ಲಿ ಉಳಿದುಕೊಂಡಿರುವವರೆಲ್ಲರೂ ಭರ್ತಿ ಮಾಡುವುದು ಕಡ್ಡಾಯವಾಗಿದೆ. ಅತಿಥಿಗಳು ಸರ್ಕಾರಿ ಮಾನ್ಯ ಗುರುತಿನ ಚೀಟಿಯನ್ನು ಸಹ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಯಾರಾದರೂ ತಪ್ಪು ವಿವರಗಳನ್ನು ಭರ್ತಿ ಮಾಡಿದರೆ ಮತ್ತು ಅವರು ಅನಾರೋಗ್ಯಕ್ಕೆ ಒಳಗಾಗಿದ್ದರೆ. ನಂತರ ಅವರನ್ನು ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿ ಕೇಸ್ ದಾಖಲಿಸಲಾಗುತ್ತದೆ. ಸುರಕ್ಷತಾ ಕಾರಣಗಳಿಂದಾಗಿ ಸೀಲ್ ಇರುವವರಿಗೆ ಒಂದು ದಿನ ಮಾತ್ರ ಪ್ರಯಾಣಿಸಲು ಅವಕಾಶವಿರುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


