ನಕಲಿ ಅಂಕಪಟ್ಟಿ ಸಲ್ಲಿಸಿ ಉದ್ಯೋಗ: 11 ನೌಕರರ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
ನಕಲಿ ಅಂಕಪಟ್ಟಿ ಸಲ್ಲಿಸಿ ಬೀದರ್ ನ್ಯಾಯಾಲಯದಲ್ಲಿ ಉದ್ಯೋಗ ಪಡೆದಿದ್ದ 11 'ಡಿ’ ಗ್ರೂಪ್ ನೌಕರರನ್ನು ವಜಾಗೊಳಿಸಿದ್ದ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಆದೇಶವನ್ನು ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.

ಬೆಂಗಳೂರು: ನಕಲಿ ಅಂಕಪಟ್ಟಿ ಸಲ್ಲಿಸಿ ಬೀದರ್ ನ್ಯಾಯಾಲಯದಲ್ಲಿ ಉದ್ಯೋಗ ಪಡೆದಿದ್ದ 11 'ಡಿ’ ಗ್ರೂಪ್ ನೌಕರರನ್ನು ವಜಾಗೊಳಿಸಿದ್ದ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಆದೇಶವನ್ನು ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.
ವಜಾಗೊಂಡ ನೌಕರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಹಾಗೂ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಈ ನೌಕರರು 7ನೇ ತರಗತಿಯ ನಕಲಿ ಅಂಕಪಟ್ಟಿ ನೀಡಿ ಕೆಲಸಕ್ಕೆ ಸೇರಿರುವುದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂಕಪಟ್ಟಿ ಪರಿಶೀಲನೆ ವೇಳೆ ದೃಢಪಟ್ಟಿತ್ತು. ಇದರ ಆಧಾರದ ಮೇಲೆ ಇವರನ್ನು ವಜಾಗೊಳಿಸಲಾಗಿತ್ತು. ಈ 11 ಮಂದಿ 2011ರಲ್ಲಿ ಬೀದರ್ ನ್ಯಾಯಾಲಯದಲ್ಲಿ ಉದ್ಯೋಗ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


