ರಾಜ್ಯ

ರಾಜ್ಯದಲ್ಲಿ 4 ಲಕ್ಷ ಜನರ ಕೋವಿಡ್ ಪರೀಕ್ಷೆ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಚೇತರಿಕೆಯ ಪ್ರಮಾಣ ಶೇಕಡಾ 44ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ 4 ಲಕ್ಷ ಜನರ ಕೋವಿಡ್ ಪರೀಕ್ಷೆ: ಡಾ. ಕೆ.ಸುಧಾಕರ್
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಚೇತರಿಕೆಯ ಪ್ರಮಾಣ ಶೇಕಡಾ 44ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕರ್ನಾಟಕ ರಾಜ್ಯ ಮಂಗಳವಾರ 4 ಲಕ್ಷ ಕೋವಿಡ್‌ ಪರೀಕ್ಷೆಯ ಗಡಿ ದಾಟಿದೆ. ಇಲ್ಲಿಯವರೆಗೆ, ನಾವು ರಾಜ್ಯಾದ್ಯಂತ 71 ಕೊರೋನಾ ಪರೀಕ್ಷಾ ಪ್ರಯೋಗಾಲಯಗಳಲ್ಲಿ 4,00,257 ಮಾದರಿಗಳನ್ನು ಪರೀಕ್ಷೆ ನಡೆಸಿದ್ದೇವೆ. ಅದರಲ್ಲಿ ಶೇ. 1.4ರಷ್ಟು ಪಾಸಿಟಿವ್ ದರ ದಾಖಲಾಗಿದೆ. 2605 ಡಿಸ್ಚಾರ್ಜ್ ಮತ್ತು 5921 ಒಟ್ಟು ಸೋಂಕಿನ ಪ್ರಕರಣಗಳೊಂದಿಗೆ, ಕರ್ನಾಟಕದ ಚೇತರಿಕೆ ಪ್ರಮಾಣವು ಆರೋಗ್ಯಕರವಾದ ಶೇ. 44ರಷ್ಟರಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.