ರಾಜ್ಯ

ಅನೈತಿಕ ಸಂಬಂಧ ಹಿನ್ನೆಲೆ ಮೆಕ್ಯಾನಿಕ್ ನ ಕೊಲೆ ಪ್ರಕರಣ: ಮೂವರ ಬಂಧನ

ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಎಸಿ ರಿಪೇರಿ ಮಾಡುವ ಮೆಕ್ಯಾನಿಕ್ ನನ್ನು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಸೇರಿ ಮೂವರು ಆರೋಪಿಗಳನ್ನು ಡಿ ಜೆ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅನೈತಿಕ ಸಂಬಂಧ ಹಿನ್ನೆಲೆ ಮೆಕ್ಯಾನಿಕ್ ನ ಕೊಲೆ ಪ್ರಕರಣ: ಮೂವರ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಎಸಿ ರಿಪೇರಿ ಮಾಡುವ ಮೆಕ್ಯಾನಿಕ್ ನನ್ನು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಸೇರಿ ಮೂವರು ಆರೋಪಿಗಳನ್ನು ಡಿ ಜೆ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ತಬ್ರೇಜ್ ನಿಜಾಮ್ ಹಾಗೂ ಅಲಿ ಬಂಧಿತರು. ಮೇ. 30ರಂದು ಶ್ಯಾಂಪುರ ರೈಲ್ವೇ ಗೇಟ್ ಬಳಿ ಎಸಿ ಮೆಕ್ಯಾನಿಕ್ ಸುಭಾನ್ ಎಂಬಾತನನ್ನು ಆರೋಪಿಗಳು ಹತ್ಯೆಗೈದಿದ್ದರು. ಪ್ರಕರಣದ ಜಾಡು ಹಿಡಿದ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ನೇತೃತ್ವದಲ್ಲಿನ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ತಬ್ರೇಜ್ ನ ಪತ್ನಿಯೊಂದಿಗೆ ಸುಭಾನ್ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೇ, ತಬ್ರೇಜ್ ನ ಪತ್ನಿಯನ್ನು ತುಮಕೂರಿಗೆ ಕರೆದೊಯ್ದು ವಾಸವಾಗಿದ್ದ. ಇದರಿಂದ ಆಕ್ರೋಶಗೊಂಡ ತಬ್ರೇಜ್, ಸುಭಾನ್ ಇರುವ ವಿಳಾಸ ಪತ್ತೆ ಮಾಡಿ ತನ್ನ ಸಹಚರರೊಂದಿಗೆ ಕಾರಿನಲ್ಲಿ ಮೊದಲು ಕಿಡ್ನ್ಯಾಪ್ ಮಾಡಿ ತುಮಕೂರಿನಿಂದ ಬೆಂಗಳೂರಿಗೆ ಕರೆತಂದಿದ್ದ. ಬಳಿಕ ಶ್ಯಾಂಪುರ ಗೇಟ್ ಬಳಿ ಆತನನ್ನು ಕೊಲೆಗೈದು ಶವ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.