ರಾಜ್ಯ

ಕೋವಿಡ್-19: ಶಂಕಿತರು ಮೃತಪಟ್ಟರೆ 6 ಗಂಟೆಗಳಲ್ಲಿ ಪರೀಕ್ಷೆ

ಕೊರೋನಾ ಸೋಂಕು ಶಂಕಿತ ವ್ಯಕ್ತಿಗಳು ಮೃತಪಟ್ಟ 6 ಗಂಟೆಯೊಳಗೆ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಕೋವಿಡ್-19: ಶಂಕಿತರು ಮೃತಪಟ್ಟರೆ 6 ಗಂಟೆಗಳಲ್ಲಿ ಪರೀಕ್ಷೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಸೋಂಕು ಶಂಕಿತ ವ್ಯಕ್ತಿಗಳು ಮೃತಪಟ್ಟ 6 ಗಂಟೆಯೊಳಗೆ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. 

ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತಜ್ವರ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಇದರಿಂದ ಮೃತಪಟ್ಟ ವ್ಯಕ್ತಿಗಳಿಗೆ ಈ ಮೊದಲಿನಿಂತೆಯೇ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕು. ಹೊರ ದೇಶ ಹಾಗೂ ಹೊರ ರಾಜ್ಯಗಳ ಪ್ರಯಾಣಿಕರಲ್ಲಿ ಈ ರೋಗ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಬೇಕು. ಮೃತಪಟ್ಟಿರುವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಅವರ ಸಂಪರ್ಕ ಹೊಂದಿರುವವರನ್ನು ಕ್ವಾರಂಟೈನ್'ಗೆ ಒಳಪಡಿಸಿ, ಅವರಿಗೂ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿದೆ. 

ಕೊರೋನಾ ಶಂಕಿತರಿಗೆ ಪರೀಕ್ಷೆ ನಡೆದಿರಲು ಹಾಗೂ ಲಕ್ಷಣ ಇರುವವರನ್ನೂ ಮಾತ್ರ ಪರೀಕ್ಷೆಗೊಳಪಡಿಸಬೇಕೆಂದು ಈ ಹಿಂದೆ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಭಾರೀ ಟೀಕೆಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ನಿರ್ಧಾರವನ್ನು ಹಿಂಪಡೆದಿರುವ ನೂತನ ಆದೇಶವನ್ನು ಹೊರಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.