ರಾಜ್ಯ

ರಾಜ್ಯದಲ್ಲಿ 7ನೇ ತರಗತಿವರೆಗೂ ಆನ್ ಲೈನ್ ಶಿಕ್ಷಣ ರದ್ದು ಮಾಡಲು ಸರ್ಕಾರ ಚಿಂತನೆ

ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‌ಲೈನ್‌ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣವನ್ನು ಗುರುವಾರ ರದ್ದುಗೊಳಿಸಿದೆ.

ರಾಜ್ಯದಲ್ಲಿ 7ನೇ ತರಗತಿವರೆಗೂ ಆನ್ ಲೈನ್ ಶಿಕ್ಷಣ ರದ್ದು ಮಾಡಲು ಸರ್ಕಾರ ಚಿಂತನೆ
ಸಚಿವ ಮಾಧುಸ್ವಾಮಿ
Published On :

ಬೆಂಗಳೂರು: ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‌ಲೈನ್‌ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣವನ್ನು ರದ್ದುಗೊಳಿಸಿದ್ದು, ಅದನ್ನು 7ನೇ ತರಗತಿವರೆಗೂ ವಿಸ್ತರಿಸಲು ಮುಂದಾಗಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, ಆನ್ ಲೈನ್ ಶಿಕ್ಷಣದ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಆನ್ ಲೈನ್ ಶಿಕ್ಷಣವನ್ನು 5ನೇ ತರಗತಿ ಬದಲು 7ನೇ ತರಗತಿವರೆಗೂ ರದ್ದುಗೊಳಿಸುವ ಚಿಂತನೆ ಇದೆ ಎಂದರು.

ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದರು. ಇಂದು ಸಹ ಈ ಕುರಿತು ಟ್ವೀಟ್ ಮಾಡಿರುವ ಸುರೇಶ್ ಕುಮಾರ್ ಅವರು, ಸಂಪುಟ ಸಭೆಯಲ್ಲಿ 7ನೇ ತರಗತಿವರೆಗೂ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ಬಗ್ಗೆ ಚರ್ಚೆಯಾಗಿದೆ. ಆದರೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.