ವಿವಿಧ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕೆಪಿಎಸ್ಸಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಕೋವಿಡ್-19 ಸೋಂಕಿನ ಭೀತಿಯಿಂದಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 18-03-2020 ಮತ್ತು 24-04-2020ರ ಪತ್ರಿಕಾ ಪ್ರಕಟಣೆಗಳಲ್ಲಿ ಮುಂದೂಡಲಾಗಿತ್ತು. ಪ್ರಸ್ತುತ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ಮರುನಿಗದಿಪಡಿಸಿದೆ. ದಿನಾಂಕ 02-08-2020ರಂದು ಕೆಎಎಸ್ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ.
ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 24ಹುದ್ದೆಗಳಿಗೆ ದಿನಾಂಕ 07-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1- ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2.30 ರಿಂದ 4.30ರ ವರೆಗೆ ಪತ್ರಿಕೆ 2).
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಣಕರು 54 ಹುದ್ದೆಗಳಿಗೆ ದಿನಾಂಕ 19-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1 - ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2 ರಿಂದ 4 ವರೆಗೆ ಪತ್ರಿಕೆ 2- ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣೆ ವಿಷಯದ ಪರೀಕ್ಷೆ ನಡೆಯಲಿದೆ). ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳಿಗೆ ದಿನಾಂಕ 02-08-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ 12 ರವರೆಗೆ ಪತ್ರಿಕೆ 1, ಹಾಗೂ ಮಧ್ಯಾಹ್ನ 2 ರಿಂದ 4 ರ ವರೆಗೆ ಪತ್ರಿಕೆ 2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ಸಿ ಪ್ರಕಟಣ ತಿಳಿಸಿದೆ.


Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


