ಕರ್ತ್ಯವ್ಯಲೋಪ: ದಾವಣಗೆರೆಯಲ್ಲಿ ಪಿಎಸ್ಐ, ಐವರು ಕಾನ್ಸ್‌ಟೇಬಲ್‍ಗಳು ಅಮಾನತು
ಕರ್ತ್ಯವ್ಯಲೋಪ ಆರೋಪದ ಮೇಲೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಐವರು ಕಾನ್ಸ್‌ಟೇಬಲ್‍ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಐಜಿಪಿ(ಪೂರ್ವ ವಲಯ) ಎಸ್ ರವಿ ಗುರುವಾರ ತಿಳಿಸಿದ್ದಾರೆ.

ದಾವಣಗೆರೆ: ಕರ್ತ್ಯವ್ಯಲೋಪ ಆರೋಪದ ಮೇಲೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಐವರು ಕಾನ್ಸ್‌ಟೇಬಲ್‍ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಐಜಿಪಿ(ಪೂರ್ವ ವಲಯ) ಎಸ್ ರವಿ ಗುರುವಾರ ತಿಳಿಸಿದ್ದಾರೆ.
ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟವನ್ನು ನಿಯಂತ್ರಿಸಲು ವಿಫಲವಾದ ಆರೋಪದ ಮೇಲೆ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ, ವಿವಿಧ ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಐಜಿಪಿ ನೇತೃತ್ವದ ತಂಡವೂ ಇಸ್ಪೀಟು ಆಡುತ್ತಿದ್ದ ಐವರು ಕಾನ್‌ಸ್ಟೆಬಲ್‌ಗಳನ್ನು ಬಂಧಿಸಿ, ಅವರಿಂದ 29,000 ರೂ ನಗದು ವಶಪಡಿಸಿಕೊಂಡಿದೆ.
ಇವರೆಲ್ಲರನ್ನೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದು, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


