ರಾಜ್ಯ

ಬಾಗಲಕೋಟೆ: ವನ್ಯಜೀವಿಗಳೊಂದಿಗೆ ಟಿಕ್ ಟಾಕ್; ಯುವಕ ಬಂಧನ

ರಾಷ್ಟ್ರ ಪಕ್ಷಿ ನವಿಲಿಗೆ ಹಿಂಸೆ ನೀಡಿ, ಮೊಲ ಕೊಂದು ಟಿಕ್ ಟಾಕ್ ವಿಡಿಯೋ ಮಾಡಿದ ಆರೋಪದಡಿ ಬಾಗಲಕೋಟೆ ಮೂಲದ ಯುವಕನೋರ್ವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ

ಬಾಗಲಕೋಟೆ: ವನ್ಯಜೀವಿಗಳೊಂದಿಗೆ ಟಿಕ್ ಟಾಕ್; ಯುವಕ ಬಂಧನ
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ:  ರಾಷ್ಟ್ರ ಪಕ್ಷಿ ನವಿಲಿಗೆ ಹಿಂಸೆ ನೀಡಿ, ಮೊಲ ಕೊಂದು ಟಿಕ್ ಟಾಕ್ ವಿಡಿಯೋ ಮಾಡಿದ ಆರೋಪದಡಿ ಬಾಗಲಕೋಟೆ ಮೂಲದ ಯುವಕನೋರ್ವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮಾದಾಪುರ ಗ್ರಾಮದ ವಿಠ್ಠಲ ವಾಲಿಕಾರ ಬಂಧಿತ ಆರೋಪಿ.ಈತ ಮೊಲ ಕೊಂದು, ನವಿಲಿನೊಂದಿಗೆ ಟಿಕ್ ಟಾಕ್ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ.ವಿಠ್ಠಲ ಮಾದಾಪುರ ಗುಡ್ಡದಲ್ಲಿ ಎರಡು ಮೊಲ ಕೊಂದು, ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. 

ನಂತರ ಪ್ರಕರಣ ಜಾಡುಹಿಡಿದ ಹುನಗುಂದ ವಲಯ ಅರಣ್ಯಾಧಿಕಾರಿ ವಿರೇಶ್, ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ನೇತೃತ್ವದ ತಂಡ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಆತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.