ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ: ಪೋಲೀಸರಿಂದ 700 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಮಂಗಳೂರು: ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಗೃಹ ಇಲಾಖೆಯ ಕಾರ್ಯದರ್ಶಿಯಿಂದ ಅಗತ್ಯ ಅನುಮತಿ ಪಡೆದ ನಂತರ 700 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಚಾರ್ಜ್‌ಶೀಟ್‌ನ ಪ್ರಕಾರ, ಎಸಿಪಿ ಬೆಳ್ಳಿಯಪ್ಪ ನೇತೃತ್ವದ ಪೊಲೀಸ್ ತನಿಖಾ ತಂಡವು ಜನರು ಮತ್ತು ಅಧಿಕಾರಿಗಳಲ್ಲಿ ಭಯ ಹುಟ್ಟಿಸುವ ಸಲುವಾಗಿ ಆರೋಪಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಸ್ಫೋಟಕವನ್ನು ಅಳವಡಿಸಿರುವುದು ಪತ್ತೆಯಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಪ್ರವೇಶದ್ವಾರದಲ್ಲಿ ಅಳವಡಿಸಲಾಗಿದ್ದ ಬಾಂಬ್ ಶೀಘ್ರದಲ್ಲೇ ಪತ್ತೆಯಾಗಿದ್ದು ವಿಮಾನ ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿ ಅದನ್ನು ನಾಶಪಡಿಸಲಾಗಿದೆ.
ಆರೋಪಿ ಪ್ರಸ್ತುತ ಜೈಲಿನಲ್ಲಿದ್ದು, ಸಾಂಕ್ರಾಮಿಕ ರೋಗ ಕೊರೋನಾ ಕಾರಣದಿಂದಾಗಿ ಆತನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಬಾಕಿ ಇದೆ. ಘಟನೆ ನಡೆದ ಎರಡು ದಿನಗಳ ನಂತರ ರಾವ್ ಬೆಂಗಳೂರಿನ ಐಜಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ. ಘಟನೆಯ ವಿಚಾರಣೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡವು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ರಾವ್ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವಾಗ ಬಾಂಬ್ ಯೋಜನೆ ಸಿದ್ದಪಡಿಸಿದ್ದ ಎನ್ನುವುದನ್ನು ಕಂಡುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


