ರಾಜ್ಯ

ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ ಜಾರಿ: ಸಚಿವ ಆರ್.ಅಶೋಕ್

ಭೂಮಿ ಮಾರಾಟದ ಮೇಲಿನ ನಿರ್ಬಂಧ ಸಡಿಲಿಸುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79ಎ 79 ಬಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಶೇಷಾಜ್ಞೆಗೆ ಒಪ್ಪಿಗೆ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ ಜಾರಿ: ಸಚಿವ ಆರ್.ಅಶೋಕ್
ಆರ್ ಅಶೋಕ್
Published On :

ಬೆಂಗಳೂರು: ಭೂಮಿ ಮಾರಾಟದ ಮೇಲಿನ ನಿರ್ಬಂಧ ಸಡಿಲಿಸುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79ಎ 79 ಬಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಶೇಷಾಜ್ಞೆಗೆ ಒಪ್ಪಿಗೆ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮುಖೇನ ಜಾರಿಗೊಳಿಸಲು ನಿರ್ಧರಿಸಿದ್ದು, ವಿಶೇಷಾಜ್ಞೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನ ಸದ್ಯಕ್ಕೆ ನಡೆಯುವುದು ಅನುಮಾನ. ಹಾಗಾಗಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುವುದು. ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

ನಮ್ಮ ರಾಜ್ಯದ ಐಟಿ ಬಿಟಿ ಜನರು ಇಲ್ಲಿನ ಕಾನೂನಿನಿಂದ ಭೂಮಿ ಖರೀದಿಸಲು ಸಾಧ್ಯವಾಗದೆ ನೆರೆ ರಾಜ್ಯಗಳಿಗೆ ಹೋಗಿ ಖರೀದಿ ಮಾಡುತ್ತಿದ್ದಾರೆ. ಬೇರೆ ರಾಜ್ಯಗಳ ಜೊತೆ ಸ್ಪರ್ಧೆ ಮಾಡಬೇಕಾದರೆ ನಾವು ಕೈಕಟ್ಟಿಕೊಂಡು ಇರಲು ಸಾಧ್ಯವಿಲ್ಲ ಹಾಗಾಗಿ ಯಾರು ಬೇಕಾದರೂ ಕೃಷಿ ಕ್ಷೇತ್ರಕ್ಕೆ ಬರಲು ಈ ಕಾಯ್ದೆ ತರುತ್ತಿದ್ದೇವೆ ಎಂದು ಅಶೋಕ್ ಬಲವಾಗಿ ಸಮರ್ಥಿಸಿಕೊಂಡರು.

ಎಸಿ, ತಹಶೀಲ್ದಾರ್ ಕಚೇರಿಯಲ್ಲಿ ಜನರಿಗೆ ಆಗುತ್ತಿದ್ದು ಕಿರುಕುಳವನ್ನು ತಪ್ಪಿಸುವ ಉದ್ದೇಶದಿಂದ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿದ್ದೇವೆ. ರಾಜ್ಯದಲ್ಲಿ 11.79 ಲಕ್ಷ ಹೆಕ್ಟೇರ್ ಭೂಮಿ ಪಾಳು ಬಿದ್ದಿದೆ. ಇದರಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿಲ್ಲ. ಕೃಷಿ ಕ್ಷೇತ್ರಕ್ಕೆ ಬರುವ ಆಸಕ್ತಿ ಇರುವವರಿಗೆ ಇನ್ನು ಮುಂದೆ ಅವಕಾಶ ಸಿಗಲಿದೆ ಐಟಿ-ಬಿಟಿ ಜನರು ಕೃಷಿ ಕಡೆ ಆಸಕ್ತಿ ತಳೆಯುತ್ತಿದ್ದು, ಇದರಿಂದ ಕೃಷಿ ಉತ್ಪನ್ನ ಹೆಚ್ಚಾಗಲಿದೆ. ಹಾಗಾಗಿ ಹಳ್ಳಿಗೆ ನಡೆಯಿರಿ ನೇಗಿಲಯೋಗಿ ಆಗಿ ಎನ್ನುವ ಘೋಷ ವಾಕ್ಯದೊಂದಿಗೆ ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.