ಇನ್ನು ಮುಂದೆ 'ಬೆಂಗಳೂರು ಸೆಂಟ್ರಲ್ ಅಲ್ಲ, ಬೆಂಗಳೂರು ಸಿಟಿ ಯೂನಿವರ್ಸಿಟಿ':ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ
ಬರುವ ಶೈಕ್ಷಣಿಕ ವರ್ಷದಿಂದ ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ ಹೆಸರು ಬದಲಾಗಲಿದೆ. ಬೆಂಗಳೂರು ಸಿಟಿ ಯೂನಿವರ್ಸಿಟಿ ಎಂಬ ಹೊಸ ನಾಮ ಸಿಗಲಿದೆ.

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ ಹೆಸರು ಬದಲಾಗಲಿದೆ. ಬೆಂಗಳೂರು ಸಿಟಿ ಯೂನಿವರ್ಸಿಟಿ ಎಂಬ ಹೊಸ ನಾಮ ಸಿಗಲಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಹೆಸರಿನಲ್ಲಿ 'ಸೆಂಟ್ರಲ್' ಪದ ಬಳಕೆಯ ಬಗ್ಗೆ ಆಕ್ಷೇಪವಿದ್ದ ಹಿನ್ನೆಲೆಯಲ್ಲಿ, ಇದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ವಿಶ್ವವಿದ್ಯಾಲಯವಾಗಿರುವುದರಿಂದ ಸೆಂಟ್ರಲ್ ಪದವನ್ನು ತೆಗೆದುಹಾಕಬೇಕೆಂದು ಅಧಿಕಾರಿಗಳು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಹೆಸರು ಬದಲಾಗುತ್ತಿದೆ. ಇತ್ತೀಚಿಗೆ ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾವಣೆ ಬಗ್ಗೆ ತೀರ್ಮಾನಿಸಲಾಯಿತು.
ಉನ್ನತ ಶಿಕ್ಷಣ ಸಂಸ್ಥೆಗಳ ಆಯುಕ್ತ ಪ್ರದೀಪ್ ಪಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ, ಬೆಂಗಳೂರು ವಿಶ್ವವಿದ್ಯಾಲಯ ಬೆಂಗಳೂರು, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಎಂದು ಮೂರು ಭಾಗಗಳಾಗಿ ವಿಂಗಡಣೆಯಾದಾಗ ಬೆಂಗಳೂರು ನಗರದ ಕೇಂದ್ರ ಭಾಗದಲ್ಲಿ ಇದು ಇರುವುದರಿಂದ ಇದನ್ನು ನಗರದ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿಪಡಿಸಬೇಕು ಎಂಬುದು ಉದ್ದೇಶವಾಗಿತ್ತು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ಬಹುತೇಕ ಕಾಲೇಜುಗಳು ಸಹ ನಗರ ವ್ಯಾಪ್ತಿಯೊಳಗೆ ಬರುತ್ತದೆ. ಬೇರೆ ನಗರಗಳಲ್ಲಿ ನಗರ ವಿಶ್ವವಿದ್ಯಾಲಯಗಳು ನಗರ ವ್ಯಾಪ್ತಿ.ಯೊಳಗೆ ಬರುತ್ತದೆ. ಹೀಗಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಕರೆದರೆ ಅದಕ್ಕೆ ವಿಶೇಷ ಗುರುತು ಸಿಗುತ್ತದೆ ಎಂದು ಸಂಪುಟ ತೀರ್ಮಾನಿಸಿದೆ ಎಂದು ಹೇಳಿದರು.
ಸಂಪುಟ ತೀರ್ಮಾನದ ಬಳಿಕ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ನಂತರ ಅದು ಪ್ರಕಟಣೆಯಾಗಿ ಜಾರಿಗೆ ಬರುತ್ತದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಪುನಶ್ಚೇತನ ಮತ್ತು ಅಭಿವೃದ್ಧಿಗೆ 150 ಕೋಟಿ ರೂಪಾಯಿಗಳ ಯೋಜನೆಗೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಅನುಮತಿ ನೀಡುವ ಪ್ರಕ್ರಿಯೆಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


