ಕೊಡಗಿನ ಹೆಮ್ಮೆಯ ನಿವೃತ್ತ ಲೆ. ಜನರಲ್ ಸಿ ಎನ್ ಸೋಮಣ್ಣ ನಿಧನ
ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಡಿಕೇರಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ ಎನ್ ಸೋಮಣ್ಣ ಶನಿವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಗಳಿಂದ ಸೊಮಣ್ಣ ವಿರಾಜ್‌ಪೇಟೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು.
ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿ ಆಶ್ರಯ ಪಡೆದಿದ್ದ ಉಗ್ರರನ್ನು ಮಟ್ಟಹಾಕಲು ಆಪರೇಷನ್ ಬ್ಲೂ ಸ್ಟಾರ್ ನಡೆಸಿದ್ದ ವೇಳೆ 1984-85ರ ಅವಧಿಯಲ್ಲಿ ಸೋಮಣ್ಣ ಸೇನಾ ಸಿಬ್ಬಂದಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಜಿಲ್ಲೆಯ ಅತ್ಯಂತ ಅನುಭವಿ ಸೇನಾಧಿಕಾರಿಗಳಲ್ಲಿ ಒಬ್ಬರಾಗಿದ್ದ ಸೋಮಣ್ಣ ಶೌರ್ಯಕ್ಕೆ ಹೆಸರಾಗಿದ್ದರು.ಮೃತರು ಪತ್ನಿ ರೇಣು ಸೋಮಣ್ಣ, ಪುತ್ರ ಡಾ. ನಿವೇದ್ ನಂಜಪ್ಪ, ಪುತ್ರಿ ಶರಣ್ ಪೆಮ್ಮಯ್ಯ ಸೇರಿದಂತೆ ಕುಟುಂಬ ಸದಸ್ಯರು ಹಾಗೂ ಆಪ್ತರನ್ನು ಅಗಲಿದ್ದಾರೆ.
ಸೋಮಣ್ಣ ಅವರ ಅಂತ್ಯ ಸಂಸ್ಕಾರ ಭಾನುವಾರ ಅವರ ಸ್ವಗ್ರಾಮದಲ್ಲಿ ನೆರವೇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


