ಭೂ ಸುಧಾರಣೆ ಕಾಯ್ದೆ: ಶೀಘ್ರದಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗುವುದು-ಸಿಎಂ ಯಡಿಯೂರಪ್ಪ
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಮನವೊಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಮನವೊಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು. ಕಾಯ್ದೆಗೆ ತಿದ್ದುಪಡಿ ತರಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಹಕರಿಸಬೇಕು ಎಂದು ಹೇಳಿದ್ದಾರೆ.
ಕಾಯ್ದೆ ತಿದ್ದುಪಡಿಯನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸುತ್ತೇನೆಂದು ತಿಳಿಸಿದ್ದಾರೆ.
ಭೂ ಸುಧಾರಣೆ ಕಾಯ್ದೆಯು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲಿದೆ. ಕಾಯ್ದೆ ತಿದ್ದುಪಡಿ ದುರ್ಬಳಕೆಯಾಗಲು ನಾನು ಬಿಡುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


