ಚಾಮರಾಜನಗರ: ಬೊಲೆರೋ ವಾಹನ ಪಲ್ಟಿ, 3 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ.

ಚಾಮರಾಜನಗರ: ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ.
ಹನೂರು ತಾಲೂಕಿನ ಕೊರಮನಕತ್ತರಿ ಜೆ.ವಿಲೇಜ್ ಬಳಿ ಸಂಭವಿಸಿದ ಅಪಘಾತದಲ್ಲಿ ಹುಣಸೇಪಾಳ್ಯದ ಚಿಕ್ಕಸಿದ್ದಮ್ಮ(55), ನಂಜುಂಡಯ್ಯ (60) ಹಾಗು ನಾಗರಾಜು(60) ಎನ್ನುವವರು ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನದಲ್ಲಿದ್ದವರು ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದರೆಂದು ತಿಳಿದುಬಂದಿದೆ.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ವಿವಾಹ ನಡೆದಿದ್ದು ಅಲ್ಲಿಂದ ಹಿಂತಿರುಗುವ ಸಮಯದಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಾಳುವಾದವರನ್ನು ಕೊಳ್ಳೇಗಾಲ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹದಿನೈದರಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದೆ.
ಘಟನೆ ಸ್ಥಳಕ್ಕೆ ಹನೂರು ಪೊಲೀಸರು ಧಾವಿಸಿ ವಾಹನದಡಿ ಸಿಲುಕಿದವರನ್ನು ಹೊರತೆಗೆಯಲು ಸಹಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


