ಕೊರೋನಾ ಸಂಕಟದ ನಡುವೆ ಪಿಎಸ್ಐ ಅದ್ದೂರಿ ಹುಟ್ಟುಹಬ್ಬ, ಅಭಿಮಾನಿಗಳಿಂದ ಹಾಲಿನ ಅಭಿಷೇಕ!
ತಾಂಡವವಾಡುತ್ತಿರುವ ಕೊರೊನಾ ಭೀತಿ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್ಐ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ.

ಕಲಬುರಗಿ: ತಾಂಡವವಾಡುತ್ತಿರುವ ಕೊರೊನಾ ಭೀತಿ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್ಐ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ.
ಜೂ. 13ರಂದು ನೆಲೋಗಿ ಠಾಣೆ ಪಿಎಸ್ ಐ ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿರುವ ವಿಡಿಯೋ ಒಂದು ವೈರಲ್ ಆಗಿದೆ.
ಈ ಸಂದರ್ಭದಲ್ಲಿ ಪಿಎಸ್‌ಐ ಮಲ್ಲಣ್ಣ ಅವರಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಅಭಿಮಾನಿಗಳು ಸಾಮಾಜಿಕ ಅಂತರ ಮರೆತಿದ್ದು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸಿದ್ದಾರೆ.
ಅಲ್ಲದೇ, ಸರ್ಕಾರದ ಆದೇಶ ಗಾಳಿಗೆ ತೂರಿದ್ದರಿಂದ ಕೊರೊನಾ ವಾರಿಯರ್ರ ಬೇಜವಾಬ್ದಾರಿತನಕ್ಕೆ ವ್ಯಾಪಕವಾಗಿ ಟೀಕೆಗಳು ಕೇಳಿ ಬಂದಿವೆ.
ಘಟನೆಗೆ ಸಂಬಂಧಿಸಿದಂತೆ ಎಸ್ಪಿ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿ, ಕೊರೊನಾ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು ಸರಿಯಲ್ಲ. ಅಲ್ಲದೇ, ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹೆಚ್ಚಿನ ಜವಾಬ್ದಾರಿ ಇರುತ್ತದೆ ಎಂದರು.
ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಪಿಎಸ್‌ಐ ಮಲ್ಲಣ್ಣ ಯಲಗೊಂಡ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


