ಮಂಗಳೂರು: ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆ!
ಸಹೋದರ, ಸಹೋದರಿಯರಿಬ್ಬರು ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಸಹೋದರ, ಸಹೋದರಿಯರಿಬ್ಬರು ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ.
ನೀಲಯ್ಯ ಶೆಟ್ಟಿಗಾರ್ (42) ಹಾಗೂ ಕೇಸರಿ (39) ಆತ್ಮಹತ್ಯೆ ಮಾಡಿಕೊಂಡವರು.
ಇಬ್ಬರೂ ಹಲವು ಸಮಯದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರು ತಮ್ಮ ಮನೆಯ ಕೋಣೆಯೊಳಗೆ ತಮಗೆ ತಾವು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೀಲಯ್ಯ ಅವರ ಸಹೋದರಿ ಮತ್ತು ಅವರ ಪತ್ನಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅವರು ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಬೆಂಕಿ ಜ್ವಾಲೆ ಹೆಚ್ಚಾಗಿ ಇಬ್ಬರೂ ಕೂಗಿಕೊಳ್ಳುತ್ತಿದ್ದ ವೇಳೆ ಅವರು ನೆರವಿಗೆ ಧಾವಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಅವರನ್ನು ಬಂಟ್ವಾಲ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಇಬ್ಬರೂ ಪ್ರಾಣ ಕಳೆದುಕೊಂಡಿದ್ದರು.
ಬಂಟ್ವಾಳ ಗ್ರಾಮೀಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪ್ರಸನ್ನ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಹಿಂದೆ ನೀಲಯ್ಯ ಕೈಮಗ್ಗ ಕೆಲಸದಲ್ಲಿ ತೊಡಗಿದ್ದರು. ಆದರೆ ಅನಾರೋಗ್ಯದ ಕಾರಣ ಅದನ್ನು ನಿಲ್ಲಿಸಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


