ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಳ್ಳಾಲ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಳ್ಳಾಲ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ವಳಚಿಲ್ ನಿವಾಸಿ ಲವಕುಮಾರ್ ಅಲಿಯಾಸ್ ಶ್ರವಣ್ ಎಂದು ಗುರುತಿಸಲಾಗಿದೆ.
ಶ್ರವಣ್ ತೊಕ್ಕೊಟ್ಟುವಿನ ಫಾಸ್ಟ್ ಫುಡ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಮಾಲೀಕರ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ. ಅತ್ಯಾಚಾರಕ್ಕೊಳಗಾದ .16 ವರ್ಷದ ಯುವತಿ ಇದೀಗ ಗರ್ಭವತಿಯಾಗಿದ್ದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಯುವತಿಯ ತಾಯಿ ತೊಕ್ಕೊಟ್ಟು ಬಳಿ ಫಾಸ್ಟ್ ಫುಡ್ ಕ್ಯಾಂಟೀನ್ ಹೊಂದಿದ್ದಾರೆ. ಅವರು ಕೆಲ ಸಂಬಂಧಿಗಳ ಸಂಪರ್ಕಕ್ಕೆ ಬಂದಿದ್ದ ಲವಕುಮಾರ್ ನನ್ನು ಕ್ಯಾಂಟೀನ್‌ನಲ್ಲಿ ಕೆಲಸ ಮಾಡಲು ನೇಮಿಸಿಕೊಂಡಿದ್ದರು. ರಾತ್ರಿ ವೇಳೆ ಆತ ಮಾಲೀಕರ ಮನೆಯಲ್ಲೇ ಉಳಿಯುತ್ತಿದ್ದ. ಈ ಸಂದರ್ಭಗಳಲ್ಲಿ, ಅವನು ಯುವತಿಯ ಜತೆ ಗೆಳೆತನ ಬೆಳೆಸಿದ್ದ. ಆಕೆ ಇಟ್ಟಿದ್ದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


