ರಾಜ್ಯ

ರಾಜ್ಯದಲ್ಲಿ ಕೊರೋನಾಗೆ ಮೊದಲ ಪೊಲೀಸ್ ಸಿಬ್ಬಂದಿ ಬಲಿ! ವಿವಿ ಪುರಂ ಎಎಸ್‌ಐ ಸಾವು, ಠಾಣೆ ಸೀಲ್ ಡೌನ್

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ.

ರಾಜ್ಯದಲ್ಲಿ ಕೊರೋನಾಗೆ ಮೊದಲ ಪೊಲೀಸ್ ಸಿಬ್ಬಂದಿ ಬಲಿ! ವಿವಿ ಪುರಂ ಎಎಸ್‌ಐ ಸಾವು, ಠಾಣೆ ಸೀಲ್ ಡೌನ್
ವಿ.ವಿ.ಪುರಂ ಪೊಲೀಸ್ ಠಾಣೆ
Published On :

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್‌ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ. 

ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಎಂದು ತಿಳಿದುಬಂದಿದೆ.

15 ದಿನಗಳಲ್ಲಿ ನಿವೃತ್ತರಾಗಲಿದ್ದ ಅವರು, ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ತಗುಲಿದೆ. ವಿಷಯ ತಿಳಿದ ತಕ್ಷಣ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಇಡೀ ಠಾಣೆಯನ್ನು ಸೀಲ್ ಡೌನ್‌ ಮಾಡಿ ಸ್ಯಾನಿಟೈಸರ್ ಮಾಡಲಾಗುತ್ತಿದೆ.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸರ್ಕಾರದ ಸುತ್ತೋಲೆಯಂತೆ ನಡೆಸಲು ಸಿದ್ಧತೆ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.