ರಾಜ್ಯ

ಅವಧಿ ಪೂರ್ಣಗೊಂಡ ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ

ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಬುಧವಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ.

ಅವಧಿ ಪೂರ್ಣಗೊಂಡ ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ
ವಿಧಾನಸೌಧ
Published On :

ಬೆಂಗಳೂರು: ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಬುಧವಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ 5 ವರ್ಷಗಳ ಅವಧಿ 2020 ರಿಂದ ಪ್ರಾರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ. ಈ ಬಾರಿ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದಿರುವ ಕಾರಣ, 5 ವರ್ಷಗಳ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಆಡಳಿತಾಧಿಕಾರಿಗಳನ್ನು ನೇಮಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸುವವರೆ ಆಡಳಿತಾಧಿಕಾರಿಗಳನ್ನು ನೇಮಿಸಲು ಇತ್ತೀಚಿಗೆ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.