ಬೆಂಗಳೂರಿನಲ್ಲಿ ಚಿಪ್ಕೋ ಚಳುವಳಿ: ನಮ್ಮ ಮಟ್ರೋಗಾಗಿ ಮರ ಕಡಿಯದಂತೆ ಅಭಿಯಾನ
ನಮ್ಮ ಮೆಟ್ರೋಗಾಗಿ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಬುಧವಾರ ಬನ್ನೇರುಘಟ್ಟ ರಸ್ತೆಯಲ್ಲಿ ಕೆಲವು ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಬೆಂಗಳೂರು: ನಮ್ಮ ಮೆಟ್ರೋಗಾಗಿ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಬುಧವಾರ ಬನ್ನೇರುಘಟ್ಟ ರಸ್ತೆಯಲ್ಲಿ ಕೆಲವು ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ಮೆಟ್ರೋ 2 ನೇ ಹಂತದ ಕಾಮಗಾರಿಗಗೆ ಮರ ಕಡಿಯುವುದನ್ನು ನಿಲ್ಲಿಸಬೇಕೆಂದು ಸರ್ಕಾರ ಮತ್ತು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ನಾಗರಿಕರು ಮರಗಳನ್ನು ತಬ್ಬಿಕೊಂಡು ಫೋಟೋ ತೆಗೆದು ಸರ್ಕಾರ ಮತ್ತು ಹೈಕೋರ್ಟ್ ಗೆ ಕಳುಹಿಸಿದ್ದಾರೆ.
ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸೋನಿಕಾ ಗೌಡ ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ಮರ ಕಡಿಯಲು ನಾವು ಬಿಡುವುದಿಲ್ಲ ಎಂದು ಘೋಷಣೆ ಕೂಗುತ್ತಿದ್ದರು.
ತಜ್ಞರ ಸಮಿತಿಯು ತನ್ನ ಕರ್ತವ್ಯವನ್ನು ಮಾಡಲು ಪದೇ ಪದೇ ವಿಫಲವಾದ ಕಾರಣ ಅದನ್ನು ರದ್ದುಗೊಳಿಸಬೇಕೆಂದು ನಾವು ಬಯಸುತ್ತೇವೆ. ಹೊಸ ಕಮಿಟಿ ರಚಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಅಧಿಕಾರಿಗಳು ಕೋರ್ಟ್ ಗೆ ದಾರಿ ತಪ್ಪಿಸುವ ವರದಿ ನೀಡಿದ್ದಾರೆ. ಬನ್ನೇರು ಘಟ್ಟದ ರಸ್ತೆ ಡೈರಿ ಸರ್ಕಲ್ ನಲ್ಲಿದ್ದ 30 ಮರಗಳ ಪೈಕಿ ಈಗಾಗಲೇ ಕಳೆದ ವಾರ 15 ಮರಗಳನ್ನು ಕತ್ತರಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


