ರಾಜ್ಯ

ಜೂನ್ 19 ರಿಂದ 21 ರವರೆಗೆ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶ ನಿಷೇಧ: ಜಿಲ್ಲಾಧಿಕಾರಿ ಆದೇಶ

ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಪ್ರವೇಶವನ್ನು ಜೂನ್ 19 ರಿಂದ 21 ರ ವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಯವರಾದ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ಜೂನ್ 19 ರಿಂದ 21 ರವರೆಗೆ ಮಲೆ ಮಹದೇಶ್ವರ ಬೆಟ್ಟ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶ ನಿಷೇಧ: ಜಿಲ್ಲಾಧಿಕಾರಿ ಆದೇಶ
ಸಂಗ್ರಹ ಚಿತ್ರ
Published On :

ಚಾಮರಾಜನಗರ: ಕೋವಿಡ್-19  ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಪ್ರವೇಶವನ್ನು ಜೂನ್ 19 ರಿಂದ 21 ರ ವರೆಗೆ ನಿಷೇಧಿಸಿ ಜಿಲ್ಲಾಧಿಕಾರಿಯವರಾದ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಮಲೆ ಮಹದೇಶ್ವರ ಸ್ವಾಮಿಗೆ ಜೂನ್ 19 ರಂದು ಎಣ್ಣೆಮಜ್ಜನ ಹಾಗೂ 20 ಮತ್ತು 21 ರಂದು  ಅಮಾವಾಸ್ಯೆ ದಿನದ ವಿಶೇಷ ಪೂಜೆಗಳು ನಡೆಯಲಿದ್ದು ಭಾನುವಾರ ಮತ್ತು ರಜಾ ದಿನಗಳಲ್ಲಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಮೂರರಿಂದ ನಾಲ್ಕು ಪಟ್ಟು ಹೆಚ್ಚಿರುತ್ತದೆ.

ಈ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಸಂರಕ್ಷಣಾ ಕ್ರಮಗಳನ್ನು ಕೈಗೊಂಡರೂ ಸಹ  ಸುಮಾರು 50,000 ಭಕ್ತರು ಬರುವ ಸಂಭವವಿರುವುದರಿಂದ ಭಕ್ತರನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಿ ದೇವರ ದರ್ಶನ ಮಾಡಿಸಲು ಕಷ್ಟ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಜೂನ್ 19 ರಿಂದ 21 ರ ವರೆಗೆ ಮಲೆ ಮಹದೇಶ್ವರ ದೇವಾಲಯ ಹಾಗೂ ಪ್ರಾಧಿಕಾರ ಆವರಣಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸುವಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರು ಪತ್ರ ಮುಖೇನ ಕೋರಿದ್ದಾರೆ. 

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ಭಕ್ತಾದಿಗಳ ಆರೋಗ್ಯ ಹಿತದೃಷ್ಟಿಯಿಂದ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜೂನ್‌ 19 ರಿಂದ 21 ರವರೆಗೆ ಮಲೆಮಹದೇಶ್ವರ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿಯವರಾದ ಡಾ.ಎಂ.ಆರ್.ರವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ವರದಿ: ಗುಳಿಪುರ ನಂದೀಶ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.