ರಾಜ್ಯ

ಹಿರಿಯ ಪತ್ರಕರ್ತ ಗೌರೀಪುರ ಚಂದ್ರು ನಿಧನ

ಹಿರಿಯ ಪತ್ರಕರ್ತ, ಗೌರೀಪುರ ಚಂದ್ರು (54 ವರ್ಷ) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ಪತ್ರಕರ್ತ ಗೌರೀಪುರ ಚಂದ್ರು ನಿಧನ
ಗೌರಿ ಪುರ ಚಂದ್ರು (ಫೇಸ್ ಬುಕ್ ಖಾತೆ ಚಿತ್ರ)
Published On :

ಬೆಂಗಳೂರು: ಹಿರಿಯ ಪತ್ರಕರ್ತ, ಗೌರೀಪುರ ಚಂದ್ರು (54 ವರ್ಷ) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ವಿಜಯ ಕರ್ನಾಟಕದ ಮುಖ್ಯ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದ ಗೌರೀಪುರ ಚಂದ್ರು ಅವರು, ಕೆಲ ದಿನಗಳಿಂದ ಜ್ವರ ಮತ್ತು ಇತರೆ ಆರೋಗ್ಯ ಸಮಸ್ಯೆಯಿಂದ  ಬಳಲುತ್ತಿದ್ದರು. ಇಂದು ಬೆಳಗ್ಗೆ 12ರ ಹೊತ್ತಿಗೆ ಪ್ರಜ್ಞಾಶೂನ್ಯರಾಗಿ ಕುಸಿದ ಬಿದ್ದ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 

ಈ ವೇಳೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರ ಸಾವು ಖಚಿತಪಡಿಸಿದ್ದಾರೆ. ಈ ವೇಳೆ ಅವರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, ಅವರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 

ಚಂದ್ರು ಅವರು, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೌರೀಪುರದ ಮೂಲದವರಾಗಿದ್ದು,  ಎಂಜಿನಿಯರಿಂಗ್ ಪದವಿ ಮುಗಿಸಿ ವೃತ್ತಿಯಲ್ಲಿ ಪತ್ರಕರ್ತರಾಗಿದ್ದರು. ಆಧ್ಯಾತ್ಮಿಕ ವಿಚಾರಗಳಲ್ಲಿ ಆಸಕ್ತಿ ಹೊಂದಿದ್ದ ಗೌರೀಪುರ ಚಂದ್ರು, ವಿಜಯ ಕರ್ನಾಟಕದ ಸಹೋದರ ಪತ್ರಿಕೆ ‘ಬೋಧಿವೃಕ್ಷ’ದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಗರದ ವಿದ್ಯಾಪೀಠ ಬಳಿ ವಾಸವಿದ್ದ ಚಂದ್ರು ಅವರು, ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಅವರ ಪತ್ನಿ ಸಂಗೀತ ಶಿಕ್ಷಕಿಯಾಗಿದ್ದರು. ಮೊದಲ ಪುತ್ರ  ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಎರಡನೇ ಪುತ್ರ ಹೈಸ್ಕೂಲ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.