ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು
ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಹಿನ್ನೆಲೆಯಲ್ಲಿ ಸಚಿವರು ವಿರುದ್ಧ ಆರ್. ಐಯ್ಯರ್ ಎಂಬುವವರು ದೂರು ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ತನ್ನ ಜಾಲ ವಿಶಾಲವಾಗಿ ಪಸರಿಸಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಸಚಿವ ಸುರೇಶ್ ಕುಮಾರ್ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ವಿದ್ಯಾರ್ಥಿ ಪೋಷಕರು ಸೇರಿ ಶಿಕ್ಷಕರ ಕುಟುಂಬಗಳಿಗೆ ಕಷ್ಟವಾಗಲಿದ್ದು, ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ. ಹೀಗಿದ್ದರೂ ಸಚಿವರು ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆದರ್ಶ ಆರ್. ಐಯ್ಯರ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರವೇ ಅವರು ಇಮೇಲ್ ಮೂಲಕ ದೂರು ನೀಡಿದ್ದಾರೆ. ಅಲ್ಲದೇ, ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸುವ ಕ್ರಮವನ್ನು ಪ್ರಶ್ನಿಸಿ ಮಕ್ಕಳ ಆರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


