ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

ಬಾಗಲಕೋಟೆ: ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.
28 ವರ್ಷದ ರೈತ ಶಂಕರಪ್ಪ ಅವರು ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1 ಲಕ್ಷ ರೂ. ಹಾಗೂ ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 3 ಲಕ್ಷ ರೂ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.
ಅಲ್ಲದೇ, ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆದಿದ್ದ ಬೆಳೆ ಹಾನಿಗೀಡಾಗಿತ್ತು. ಹೀಗಾಗಿ ಆಗಿನಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಸಾಲ ಹೇಗೆ ಪಾವತಿಸುವುದು ಎಂದು ನೊಂದಿದ್ದರು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


