ಕೊರೋನಾ ಭಯದ ನಡುವೆಯೇ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆ ಪಾರ್ಕ್ ತೆರೆಯಲು ಸರ್ಕಾರ ಸಮ್ಮತಿ
ಲಾಕ್‌ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಕಂಟೈನ್‌ಮೆಂಟ್ ಪ್ರದೇಶ ಹೊರತುಪಡಿಸಿ ಇತರೆಡೆ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

ಬೆಂಗಳೂರು: ಲಾಕ್‌ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಕಂಟೈನ್‌ಮೆಂಟ್ ಪ್ರದೇಶ ಹೊರತುಪಡಿಸಿ ಇತರೆಡೆ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಉದ್ಯಾನವನಗಳನ್ನು ತೆರೆಯುವ ಅವಧಿಯಲ್ಲಿ ಸ್ಥಳೀಯ ಮಹಾನಗರಪಾಲಿಕೆ, ಪಾಲಿಕೆಗಳು ನಿರ್ಧರಿಸಬಹುದು ಎಂದಿದೆ.
ಸದ್ಯ ಎಲ್ಲ ಪಾರ್ಕ್‌ಗಳನ್ನು ಬೆಳಿಗ್ಗೆ 7ರಿಂದ 9 ಗಂಟೆವರೆಗೆ ಮತ್ತು ಸಂಜೆ 4ರಿಂದ 7 ಗಂಟೆವರೆಗೆ ಸಾರ್ವಜನಿಕರಿಗಾಗಿ ತೆರೆಯಲಾಗುತ್ತಿದೆ.
ಲಾಕ್ ಡೌನ್ ವಿಸ್ತರಣೆ ಕುರಿತು ಮೇ 30ರಂದು ಮಾರ್ಗಸೂಚಿ ಹೊರಡಿಸಿದ್ದ ಕೇಂದ್ರ ಗೃಹ ಸಚಿವಾಲಯ, ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಅನ್ ಲಾಕ್ 1.0 ಜಾರಿಗೊಳಿಸಿತ್ತು. ಇದರ ಪ್ರಕಾರ, ಹಂತ ಹಂತವಾಗಿ ನಿಷೇಧಿತ ಚಟುವಟಿಕೆ ತೆರವುಗೊಳಿಸಲು ಲಾಕ್‌ಡೌನ್ ಸಡಿಲಿಕೆಗೆ ಹೊಸ ಮಾರ್ಗಸೂಚಿಯಲ್ಲಿ ಅವಕಾಶ ಮಾಡಿಕೊಡಲಾಗಿತ್ತು.
ಆದರೆ, ಕೋವಿಡ್ 19 ಹರಡುವಿಕೆ ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದೂ ಈ ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


