ರಾಜ್ಯ

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್ ಸಾವು

ಮಹಾಮಾರಿ ಕೊರೊನಾ ಮರಣಮೃದಂಗ ಮುಂದುವರೆಸಿದ್ದು, ಇದೀಗ ಸೋಂಕಿಗೆ ರಾಜ್ಯದಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ಪೊಲೀಸ್ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮಹಾಮಾರಿ ಕೊರೊನಾ ಮರಣಮೃದಂಗ ಮುಂದುವರೆಸಿದ್ದು, ಇದೀಗ ಸೋಂಕಿಗೆ ರಾಜ್ಯದಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.

ಇತ್ತೀಚಿಗಷ್ಟೇ ವಿವಿ ಪುರಂನ ಎಎಸ್ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಶನಿವಾರ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸೋಂಕಿಗೆ ಬಲಿಯಾಗಿದ್ದು, ಇಲಾಖೆಗೆ ಮತ್ತೊಂದು ಉಂಟಾಗಿದೆ. 

ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 56 ವರ್ಷದ ಮುಖ್ಯಪೇದೆಯನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಅಲ್ಲದೇ, ಇದೇ ಠಾಣೆಯ ಒಟ್ಟು 9 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

ಕೊರೊನಾ ದಿನೇ ದಿನೇ ಪೊಲೀಸರನ್ನು ಆವರಿಸಿಕೊಳ್ಳುತ್ತಿದ್ದು, ಬೆಂಗಳೂರಿನ ಪೊಲೀಸರನ್ನು ಬೆಚ್ಚಿಬಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.