ಆನ್ಲೈನ್ ತರಗತಿಗೆ ನಿಷೇಧ: ಪರ್ಯಾಯ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!
ಆನ್‌ಲೈನ್ ತರಗತಿಗಳನ್ನು ನಿಷೇಧಿಸಿರುವುದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಸೂಚಿಸಿದೆ.

ಬೆಂಗಳೂರು: ಆನ್‌ಲೈನ್ ತರಗತಿಗಳನ್ನು ನಿಷೇಧಿಸಿರುವುದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಸೂಚಿಸಿದೆ.
ಕೋವಿಡ್-19ರ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿಗಳಿಗೆ ಸೀಮಿತ ಅವಧಿಗೆ ಆನ್ ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬಹುದೇ ಎಂಬುದರ ಕುರಿತು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಪ್ರಾಥಮಿಕ ಶಾಲೆಗಳಿಗೆ ಆನ್ ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಜೂನ್ 15 ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ನಿಗದಿತ ಅವಧಿಗೆ ಆನ್ ಲೈನ್ ಶಿಕ್ಷಣ ಒದಗಿಸಬಹುದೇ ಎಂದು ಪ್ರಶ್ನಿಸಿತು.
ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಹೇಗೆ ಅನ್ವಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


