ಬೀದರ್: ಕೋವಿಡ್ ಇದೆ ಎಂದು ಭಯದಿಂದ ಯುವಕ ಆತ್ಮಹತ್ಯೆ, ವರದಿಯಲ್ಲಿ ಬಂತು 'ನೆಗೆಟಿವ್'!
ತನಗೆ ಕೊರೋನಾವೈರಸ್ ಸೋಂಕು ತಗುಲಿದೆ ಎಂದು ಭಯಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವ ಕಲ್ಯಾಣ ತಾಲೂಕಿನಲ್ಲಿ ನಡೆದಿದೆ.

ಬೀದರ್: ತನಗೆ ಕೊರೋನಾವೈರಸ್ ಸೋಂಕು ತಗುಲಿದೆ ಎಂದು ಭಯಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವ ಕಲ್ಯಾಣ ತಾಲೂಕಿನಲ್ಲಿ ನಡೆದಿದೆ.
ಬಸವ ಕಾಲ್ಯಾಣದ ತ್ರಿಪುರಾಂತ್ ಎಂಬಲ್ಲಿ ನಡೆದ ಘಟನೆಯಲ್ಲಿ ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈತ ತನ್ನ ಕೊರೋನಾ ಟೆಸ್ಟ್ ವರದಿ ಬರುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಬಂದಿದ್ದ ಅದರಂತೆ, ಅವನಿಗೆ ಕೊರೋನಾ ಟೆಸ್ಟ್ ಮಾಡಲಾಗಿತ್ತು.ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಕೈಗೆ ಬರುವ ಮುನ್ನವೇ ತಮಗೆ ಕೊರೋನಾ ಇದೆ ಎಂದು ಭಯಗೊಂಡ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶನಿವಾರ ಬೆಳಿಗ್ಗೆ ಮೆಟ್ರೆ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆತನ ವರದಿ ಬಂದಿದ್ದು ಯುವಕನಿಗೆ ಕೊರೋನಾ ಸೋಂಕು ಇಲ್ಲವೆಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತಪಡಿಸಿವೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಯ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


