ಮಹಿಳೆಯೊಂದಿಗೆ ಅನುಚಿತ ವರ್ತನೆ: ಸಿಸಿಟಿವಿ ದೃಶ್ಯಾವಳಿ ಆಧರಿಸಿ ಯುವಕನ ಬಂಧನ
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಯುವಕನೊಬ್ಬನನ್ನು ನಗರದ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಆರ್ ಟಿ ನಗರದ ಸಂತೋಷ್ ಬಂಧಿತ ಆರೋಪಿಯಾಗಿದ್ದಾನೆ.

ಬೆಂಗಳೂರು: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಯುವಕನೊಬ್ಬನನ್ನು ನಗರದ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಆರ್ ಟಿ ನಗರದ ಸಂತೋಷ್ ಬಂಧಿತ ಆರೋಪಿಯಾಗಿದ್ದಾನೆ.
ಇದೇ 20ರಂದು ಮಧ್ಯಾಹ್ನ 12.10ರ ಸುಮಾರಿಗೆ ಗಿಡ್ಡಪ್ಪ ಬ್ಲಾಕ್ ಅಪಾರ್ಮೆಂಟ್ ಬಳಿ ದಿನಸಿ ತರಲು ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಯುವಕನೋರ್ವ ತನ್ನೊಂದಿಗೆ ಅನುಚಿತ ವರ್ತನೆ ತೋರಿದ್ದಾನೆ ಎಂದು ಆರೋಪಿಸಿ 40 ವರ್ಷದ ಮಹಿಳೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದ್ದು,ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆಸಿ ನಗರ ಉಪವಿಭಾಗ ಎಸಿಪಿ ರೀನಾ ಸುವರ್ಣ ಮಾರ್ಗದರ್ಶನದಲ್ಲಿ ಆರ್ ಟಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿಜೆ ವಿಥುನ್ ಶಿಲ್ಪಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


