ರಾಜ್ಯ

ನಿಮ್ಹಾನ್ಸ್ ಆಸ್ಪತ್ರೆಗೂ ಕೊರೋನಾ ಸೋಂಕು ಭೀತಿ, ಐಸಿಯು ವಾರ್ಡ್ ಸ್ಥಗಿತ

ಮಾರಕ ಕೊರೋನಾ ವೈರಸ್ ಅಟ್ಟಹಾಸ ನಿಮ್ಹಾನ್ಸ್ ಆಸ್ಪತ್ರೆಗೂ ತಟ್ಟಿದ್ದು, ಇಲ್ಲಿನ ಐಸಿಯು ವಾರ್ಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ನಿಮ್ಹಾನ್ಸ್ ಆಸ್ಪತ್ರೆಗೂ ಕೊರೋನಾ ಸೋಂಕು ಭೀತಿ, ಐಸಿಯು ವಾರ್ಡ್ ಸ್ಥಗಿತ
ನಿಮ್ಹಾನ್ಸ್ ಆಸ್ಪತ್ರೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ನಿಮ್ಹಾನ್ಸ್ ಆಸ್ಪತ್ರೆಗೂ ತಟ್ಟಿದ್ದು, ಇಲ್ಲಿನ ಐಸಿಯು ವಾರ್ಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮೂಲಗಳ ಪ್ರಕಾರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಮಾನಸಿಕ ಅಸ್ವಸ್ಥರಿಗಿರುವ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ರೋಗಿಗೆ ವೈರಸ್ ಒಕ್ಕರಿಸಿದೆ. ಈ ರೋಗಿಯ ಸಂಪರ್ಕದಲ್ಲಿದ್ದ ನಾಲ್ವರನ್ನು ಕೂಡಲೇ ಕ್ವಾರಂಟೈನ್ ಮಾಡಲಾಗಿದ್ದು, ಆಸ್ಪತ್ರೆಯ ಐಸಿಯು ವಾರ್ಡ್ ಅನ್ನು ಸ್ಥಗಿತ ಮಾಡಲಾಗಿದೆ. ಅಲ್ಲದೆ ಸೋಂಕಿತರನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಸಂಪರ್ಕದಲ್ಲಿದ್ದ 10ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿಯೇ ಒಟ್ಟು 8 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದ್ದು, ವೈದ್ಯರಲ್ಲಿ ಆತಂಕ ಹೆಚ್ಚಿದೆ. ಇನ್ನು ಪರ್ಯಾಯವಾಗಿ ಐಸಿಯು ವಾರ್ಡ್ ನಲ್ಲಿದ್ದ 20 ರೋಗಿಗಳನ್ನ ಪಕ್ಕದ ಬಿಲ್ಡಿಂಗ್‍ಗೆ ಶಿಫ್ಟ್ ಮಾಡಲಾಗಿದ್ದು, ಎಂದಿನಂತೆ ಚಿಕಿತ್ಸೆ ನೀಡಲಾಗುತ್ತಿದೆ. 

ಅಂತೆಯೇ ನ್ಯೂರೋ ಸರ್ಜರಿ ಹಾಗೂ ಸೈಕ್ಯಾಟ್ರಿಯ ತಲಾ ಒಬ್ಬ ರೋಗಿ ಹಾಗೂ ಆಸ್ಪತ್ರೆಯ 6 ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ಒಟ್ಟು ನಿಮಾನ್ಸ್ ಆಸ್ಪತ್ರೆಯಲ್ಲಿ 8 ಮಂದಿಗೆ ಸೋಂಕು ಹರಡಿದೆ. ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗಳಿಗೆ ಸ್ವಾಬ್ ಟೆಸ್ಟ್ ನಡೆಸಲಾಗುತ್ತಿದ್ದು, ಸೋಂಕಿನ ಚೈನ್ ಮುರಿಯಲು ನಿಮ್ಹಾನ್ಸ್ ಆಸ್ಪತ್ರೆಯ ಆಡಳಿತ ಮಂಡಳಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳ ಕಂಪ್ಲೀಟ್ ಮಾಹಿತಿಯನ್ನ ಟ್ರೇಸ್ ಮಾಡಿ ಚಿಕಿತ್ಸೆ ನೀಡಲು ನಿರ್ಧರಿಸಿದ್ದಾರೆ. ಐಸಿಯು ಶಿಫ್ಟ್ ಆದರೂ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಚಿಕಿತ್ಸೆ ನೀಡಲು ತಜ್ಞ ವೈದ್ಯರೇ ಫುಲ್ ಅಲರ್ಟ್ ಆಗಿದ್ದಾರೆ.

ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾಮಾಜಿಕ ಅಂತರ ಸೇರಿದಂತೆ ಕಡ್ಡಾಯ ನಿಯಮಗಳನ್ನು ತಪ್ಪದೇ ಪಾಲನೆ ಮಾಡಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.