ರಾಜ್ಯ

ಪೊಲೀಸರಿಗೆ ಐದು ಕೋವಿಡ್-19 ಆಸ್ಪತ್ರೆ ಮೀಸಲು: ಬಸವರಾಜ ಬೊಮ್ಮಾಯಿ

ಕೊರೋನಾ ವಾರಿಯರ್ ಸಿಲಿಕಾನ್ ಸಿಟಿ ಪೊಲೀಸರಲ್ಲಿ‌ ಇತ್ತೀಚೆಗೆ ಕೊರೋನಾ ಸೋಂಕು‌ ಹೆಚ್ಚಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿಬ್ಬಂದಿಗಾಗಿ ಐದು ಖಾಸಗಿ ಆಸ್ಪತ್ರೆಗಳನ್ನು ಕಾಯ್ದಿರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಪೊಲೀಸರಿಗೆ ಐದು ಕೋವಿಡ್-19 ಆಸ್ಪತ್ರೆ ಮೀಸಲು: ಬಸವರಾಜ ಬೊಮ್ಮಾಯಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೊರೋನಾ ವಾರಿಯರ್ ಸಿಲಿಕಾನ್ ಸಿಟಿ ಪೊಲೀಸರಲ್ಲಿ‌ ಇತ್ತೀಚೆಗೆ ಕೊರೋನಾ ಸೋಂಕು‌ ಹೆಚ್ಚಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿಬ್ಬಂದಿಗಾಗಿ ಐದು ಖಾಸಗಿ ಆಸ್ಪತ್ರೆಗಳನ್ನು ಕಾಯ್ದಿರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಕೊರೋನಾ ನಿಯಂತ್ರಣದ ಲಾಕ್‌ಡೌನ್ ಕಾರ್ಯಗಳನ್ನು ಪೊಲೀಸ್ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಈ ನಡುವೆ ಕರ್ತವ್ಯದಲ್ಲಿದ್ದ ಇಲಾಖೆಯ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಅವರ ಆರೋಗ್ಯದ ದೃಷ್ಟಿಯಿಂದ ಗೃಹ ಇಲಾಖೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಆದೇಶ ಹೊರಡಿಸಿದೆ.

ನಗರದಲ್ಲಿ ಪೊಲೀಸ್ ಸಿಬ್ಬಂದಿಗಾಗಿ ಐದು ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಪಾಸಿಟಿವ್ ರೋಗಿಗಳಿಗೆ ಕಾಯ್ದಿರಿಸುವುದು ಹಾಗೂ ಸಿಬ್ಬಂದಿಗಾಗಿ ಪ್ರತ್ಯೇಕವಾಗಿ ಒಂದು ಕೋವಿಡ್ ಪರೀಕ್ಷಾ ಪ್ರಯೋಗಾಲಯವನ್ನು ಹಾಗೂ ಗಂಟಲು ದ್ರವ ಸಂಗ್ರಹಿಸಿದ ಸಂಚಾರಿ ವಾಹನವನ್ನು ಕಾಯ್ದಿರಿಸಬೇಕು ಎಂದು ಗೃಹ ಸಚಿವರು ಒಳಾಡಳಿತ ಇಲಾಖೆಗೆ ಆದೇಶ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಪೊಲೀಸ್ ಸಿಬ್ಬಂದಿಗೆ ಉತ್ತಮ ಊಟ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುವಂತೆ ಗೃಹ ಸಚಿವರು ಸೂಚಿಸಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ಬೆಂಗಳೂರು ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಈವರೆಗೆ ಒಟ್ಟು 75 ಪೊಲೀಸರಿಗೆ ಸೋಂಕು ತಗುಲಿರುವುದು ದೃಢಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.