ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ ಸೈಟ್ ರದ್ದುಗೊಳಿಸಿದ ಬಿಡಿಎ
ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಬಿಡಿಎ ಶಾಕ್ ನೀಡಿದೆ. ಬೆಂಗಳೂರು ನಗರದಲ್ಲಿ ನೀಡಲಾಗಿದ್ದ ಸಿಎ ನಿವೇಶವನ್ನು ರದ್ದುಗೊಳಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಬಿಡಿಎ ಶಾಕ್ ನೀಡಿದೆ. ಬೆಂಗಳೂರು ನಗರದಲ್ಲಿ ನೀಡಲಾಗಿದ್ದ ಸಿಎ ನಿವೇಶವನ್ನು ರದ್ದುಗೊಳಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
2004ರಲ್ಲಿ ಧರ್ಮಸಿಂಗ್ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬನಶಂಕರಿ 2ನೇ ಹಂತದಲ್ಲಿ ಅಸಾರಾಂ ಬಾಪು ಆಶ್ರಮದ ಕಟ್ಟಡ ನಿರ್ಮಾಣಕ್ಕೆ ಸಿಎ ಸೈಟ್ ನೀಡಿತ್ತು. 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಇದನ್ನು ನೀಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು 2014ರಲ್ಲಿ ಈ ನಿವೇಶನದಲ್ಲಿ 3 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸಾಯ್ ದತ್ತ ಎಂಬುವರು. ಆಶ್ರಮ ಬಿಡಿಎ ಒಪ್ಪಂದದ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದೆ ಎಂದು ದೂರು ನೀಡಿದ್ದರು.
ಸುಮಾರು 4,2 ಕೋಟಿ ರು ಮೌಲ್ಯದ ಜಾಗ ಇದಾಗಿದ್ದು ಧಾರ್ಮಿಕ ಕಾರ್ಯಕ್ರಮಗಳ ಉಪಯೋಗಕ್ಕಾಗಿ ನೀಡಿದ್ದ 6 ಸಾವಿರ ಅಡಿ ಅಳತೆಯನಿವೇಶನದಲ್ಲಿ ಆಯುರ್ವೇದ ಔಷಧ ಮಾರಾಟ ಮಾಡಲಾಗುತ್ತಿದೆ.
ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ್ದ ಜಾಗದಲ್ಲಿ ಬಿಡಿಎ ನಿಯಮಗಳ ಉಲ್ಲಂಘನೆಯಾಗುತ್ತಿದೆ. ಸಿಎ ನಿವೇಶನ ಹಂಚಿಕೆಯನ್ನು ರದ್ದುಗೊಳಿಸಬೇಕು. ಕಟ್ಟಡವನ್ನು ಬಿಡಿಎ ವಶಕ್ಕೆ ಪಡೆದುಕೊಂಡು ಬೇರೆ ಸಂಸ್ಥೆಗೆ ನೀಡಬಹುದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ನಿವೇಶನ ಹಂಚಿಕೆಯನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ರದ್ಧತಿ ನೋಟೀಸ್ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಸ್ವಯಂ ಘೋಷಿತ ದೇವಮಾನದ ಅಸಾರಾಂ ಬಾಪು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿ. ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


