ಬೆಂಗಳೂರು: ಕೊರೋನಾ ಭಯ, ಕೆಎಸ್ಆರ್ಪಿ ಸಿಬ್ಬಂದಿ ಆತ್ಮಹತ್ಯೆ
ಕೊರೋನಾ ಇದೆ ಎಂಬ ಭಯದಿಂದ ಕೆಎಸ್ಆರ್ಪಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕೊರೋನಾ ಇದೆ ಎಂಬ ಭಯದಿಂದ ಕೆಎಸ್ಆರ್ಪಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
50 ವರ್ಷದ ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇವರಿಗೆ ಸೋಮವಾರ ಸಂಜೆ ಕೊರೋನಾ ಇರುವುದು ದೃಢವಾಗಿತ್ತು.
ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್ 4ನೇ ಬೆಟಾಲಿಯನ್ ಕೆಎಸ್ಆರ್ಪಿ ಸಿಬ್ಬಂದಿಯಾಗಿದ್ದರು.
ಸೋಂಕಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೇ ತಿಂಗಳ 20ರಂದು ಅವರಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು.
ಸೋಮವಾರ ಸಂಜೆ ವೈದ್ಯಕೀಯ ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಕಮಾಡೆಂಟ್ ಸೂಚಿಸಿದ್ದರು.
ಹೀಗಾಗಿ, ರಾತ್ರಿ ಸೋಂಕಿತ ಪೇದೆಯನ್ನು ಕೋರಮಂಗಲದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು. ವ್ಯಾನ್ ನಲ್ಲಿ ಸೋಂಕಿತ ಪೇದೆ ಹಿಂದೆ ಕುಳಿತಿದ್ದರೇ, ಮತ್ತೋರ್ವರು ವಾಹನ ಚಾಲನೆ ಮಾಡುತ್ತಿದ್ದರು.
ಬಸ್ಸಿನಲ್ಲೇ ಸೋಂಕಿತ ಪೇದೆ ತಾವು ಉಟ್ಟಿದ್ದ ಪಂಚೆಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವ್ಯಾನ್ ಹಿಂಬದಿ ಕುಳಿತರೆ ಯಾರಿಗೂ ಸಹ ಗೊತ್ತಾಗುವುದಿಲ್ಲ.
ವ್ಯಾನ್ ವಿಕ್ಟೋರಿಯಾ ಆಸ್ಪತ್ರೆ ಬಳಿ ತಲುಪಿದಾಗ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ರಾತ್ರಿ ಸುಮಾರು10 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ಸಿಲಿಕಾನ್ ಸಿಟಿಯ ಇಬ್ಬರೂ ಎಎಸ್ ಐ ಹಾಗೂ ಓರ್ವ ಹೆಡ್ ಕಾನ್ಸ್ ಟೇಬಲ್ ಸೋಂಕಿಗೆ ಬಲಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


