ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ: ಎಚ್.ಡಿ. ಕುಮಾರಸ್ವಾಮಿ
ಕೊರೊನಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಜುಲೈ 25 ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಆಗ್ರಹಿಸಿದ್ದಾರೆ.

ಬೆಂಗಳೂರು: ಕೊರೊನಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಜುಲೈ 25 ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಒಂದುವೇಳೆ ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


