ಐಎಂಎ ಹಗರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ
ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಐಎಂಎ ಹಗರಣದ ಪ್ರಕರಣದಲ್ಲಿ ವಿಜಯ್ ಶಂಕರ್ ಅಮಾನತುಗೊಂಡು, ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರು. ಜಯನಗರ ನಿವಾಸದಲ್ಲಿ ವಿಜಯ್ ಶಂಕರ್ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ ವಿಜಯ್ ಶಂಕರ್ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು.
ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ 2019 ಜುಲೈ 8ರಂದು ಲಂಚ ಪಡೆದ ಆರೋಪದಲ್ಲಿ ವಿಜಯ್ ಶಂಕರ್ ಅವರನ್ನ ಎಸ್‍ಐಟಿ ಬಂಧಿಸಿತ್ತು. ಜಾಮೀನು ಪಡೆದು ವಿಜಯ್ ಶಂಕರ್ ಹೊರಬಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


