ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ.
ಸುಧಾಕರ್ ಅವರ ಮನೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ನಿನ್ನೆ ಬೆಳಗ್ಗೆ ಸುಧಾಕರ್ ಅವರ 82 ವರ್ಷ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇನ್ನು ಮನೆಯವರೆಲ್ಲರ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು ಪತ್ನಿ ಮತ್ತು ಮಗಳಿಗೆ ಸೋಂಕು ದೃಢಪಟ್ಟಿದ್ದು, ನಾನು ಮತ್ತು ನನ್ನ ಇಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


