ರಾಜ್ಯ

ಚಿಕ್ಕಬಳ್ಳಾಪುರ: ಬೋರ್ ವೆಲ್ ಲಾರಿ ಪಲ್ಟಿ, ಮೂವರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ

ಬೋರ್ ವೆಲ್ ಪೈಪುಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಕಸ್ಮಿಕವಾಗಿ ರಸ್ತೆ ಬದಿಗೆ ಮುಗುಚಿ ಬಿದ್ದ ಪರಿಣಾಮವಾಗಿ ಮೂರು ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಬೋರ್ ವೆಲ್ ಲಾರಿ ಪಲ್ಟಿ, ಮೂವರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
Published On :

ಚಿಕ್ಕಬಳ್ಳಾಪುರ: ಬೋರ್ ವೆಲ್ ಪೈಪುಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಕಸ್ಮಿಕವಾಗಿ ರಸ್ತೆ ಬದಿಗೆ ಮುಗುಚಿ ಬಿದ್ದ ಪರಿಣಾಮವಾಗಿ ಮೂರು ಮಂದಿ ಕೂಲಿ ಕಾರ್ಮಿಕರು  ಸ್ಥಳದಲ್ಲಿಯೇ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕ ಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸವುಡ್ಯ‌ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ‌ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರ ಪೈಕಿ ಇಬ್ಬರು ಮಧ್ಯಪ್ರದೇಶ ಹಾಗೂ ಮತ್ತೊಬ್ಬ ಛತ್ತೀಸ್ ಗಢ ನಿವಾಸಿಗಳೆಂದು ತಿಳಿದು ಬಂದಿದೆ. ಬೋರ್ ವೆಲ್ ಕೊರೆಯುವ ಲಾರಿಗೆ ಪೈಪುಗಳು ಒದಗಿಸುವ ಸಹಾಯಕ ಲಾರಿ ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ‌ ಲಾರಿಯೊಳಗಿನ ಕಬ್ಬಿಣದ ಪೈಪುಗಳ ಮಧ್ಯೆ ಸಿಲುಕಿಕೊಂಡ ಕೂಲಿ‌ ಕಾರ್ಮಿಕರನ್ನು ಜೆಸಿಬಿ ಯಂತ್ರದ ಸಹಾಯದೊಂದಿಗೆ ಪೈಪುಗಳನ್ನು ತೆರವುಗೊಳಿಸಿ ಕಾರ್ಮಿಕರನ್ನು  ಹೊರ ತೆಗೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.