ಕೋವಿಡ್-19: ಸೋಂಕಿತ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗೆ ರವಿಶಂಕರ್ ಗುರೂಜಿ ಆಶ್ರಮದ ಒಂದು ಮಹಡಿ ಮೀಸಲು
ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸಿಬ್ಬಂದಿಗೂ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಏರುತ್ತಿದ್ದು, ಈ ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮೀಸಲಿಟ್ಟಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸಿಬ್ಬಂದಿಗೂ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಏರುತ್ತಿದ್ದು, ಈ ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮೀಸಲಿಟ್ಟಿದೆ.
ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಒಂದು ಮಹಡಿ ಮತ್ತು ಇಂದಿನಾಗರದ ಇಎಸ್ಐ ಆಸ್ಪತ್ರೆಯನ್ನು ಕೋವಿಡ್ ಸೋಂಕಿತ ಪೊಲೀಸ್ ಸಿಬ್ಬಂದಿಗಳಿಗಾಗಿ ಮೀಸಲಿಡಲಾಗಿದೆ.
ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯನ್ನು ಮೀಸಲಾಗಿ ಇಡಬೇಕು ಎಂದು ಈ ಹಿಂದೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದರು. ಈ ಆದೇಶದ ಅನ್ವಯ ಎರಡು ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ಗುರ್ತಿಸಿದ್ದು, ಈ ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


