ಕೊರೋನಾ ಭಯ: ಮೂರು ದಿನ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸೀಲ್ ಡೌನ್
ಸಿಲಿಕಾನ್ ಸಿಟಿ ಪೊಲೀಸರಲ್ಲಿ ಇತ್ತೀಚೆಗೆ ಕೊರೋನಾ ಹೆಚ್ಚಾಗಿ ವಕ್ಕರಿಸುತ್ತಿದ್ದು, ಇದೀಗ ನಗರ ಪೊಲೀಸ್ ಆಯುಕ್ತರ ಕಚೇರಿಗೂ ಕೊರೋನಾ ಕಾಲಿಟ್ಟಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಪೊಲೀಸರಲ್ಲಿ ಇತ್ತೀಚೆಗೆ ಕೊರೋನಾ ಹೆಚ್ಚಾಗಿ ವಕ್ಕರಿಸುತ್ತಿದ್ದು, ಇದೀಗ ನಗರ ಪೊಲೀಸ್ ಆಯುಕ್ತರ ಕಚೇರಿಗೂ ಕೊರೋನಾ ಕಾಲಿಟ್ಟಿದೆ.
ಬಂಧಿತ ಆರೋಪಿಗಳು ಮತ್ತು ಪೊಲೀಸ್ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಪೊಲೀಸ್ ಸ್ಟೇಷನ್ಗಳು ಸೀಲ್ಡೌನ್ ಆಗಿವೆ. ಇದೀಗ ನಗರ ಪೊಲೀಸ್ ಆಯುಕ್ತರ ಕಚೇರಿಯೂ ಸೀಲ್ಡೌನ್ ಮಾಡಿ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಆದೇಶಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಕರ್ತವ್ಯದಲ್ಲಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆಯುಕ್ತರ ಕಚೇರಿಯನ್ನು ಜೂ. 27ರಿಂದ 29 ರವರೆಗೆ ಮೂರು ದಿನಗಳ ಕಾಲ ಮುಚ್ಚಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು, ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಮನೆಯಿಂದ ಅಥವಾ ಉಪ ವಿಭಾಗದ ಕಚೇರಿಯಿಂದ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ನಗರ ನಿಯಂತ್ರಣ ಕೋಣೆಯಲ್ಲಿ ನಿಯಮಿತ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಇದರ ಹೊರತಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಯಾವುದೇ ಕೆಲಸ ನಿರ್ವಹಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


