ನಾಗಮಂಗಲ: ಇಬ್ಬರು ಬಾಲಕರು ಸೇರಿ ಮೂವರು ನೀರು ಪಾಲು
ಇಬ್ಬರು ಬಾಲಕರು ಮತ್ತು ಓರ್ವ ಯುವಕ ಸೇರಿದಂತೆ ಒಟ್ಟು ಮೂವರು ನೀರುಪಾಲಾಗಿರುವ ಘಟನೆ ನಾಗಮಂಗಲ ತಾಲ್ಲೂಕಿನ ದಡಗ ಮತ್ತು ಉಪ್ಪಾರಹಳ್ಳಿಯಲ್ಲಿಂದು ನಡೆದಿದೆ. ದಡಗ ಗ್ರಾಮದ ಮನು (೧೨) ಹಾಗೂ ಪುನೀತ್ (೧೦) ಎಂಬ ಬಾಲಕರು ಮತ್ತು ಉಪ್ಪಾರಹಳ್ಳಿಯ ವಿಜಯ್ ಕುಮಾರ್ (೨೫) ಮೃತ ದುರ್ದೈವಿಗಳು.

ಮಂಡ್ಯ: ಇಬ್ಬರು ಬಾಲಕರು ಮತ್ತು ಓರ್ವ ಯುವಕ ಸೇರಿದಂತೆ ಒಟ್ಟು ಮೂವರು ನೀರುಪಾಲಾಗಿರುವ ಘಟನೆ ನಾಗಮಂಗಲ ತಾಲ್ಲೂಕಿನ ದಡಗ ಮತ್ತು ಉಪ್ಪಾರಹಳ್ಳಿಯಲ್ಲಿಂದು ನಡೆದಿದೆ. ದಡಗ ಗ್ರಾಮದ ಮನು(೧೨) ಹಾಗೂ ಪುನೀತ್(೧೦) ಎಂಬ ಬಾಲಕರು ಮತ್ತು ಉಪ್ಪಾರಹಳ್ಳಿಯ ವಿಜಯ್ ಕುಮಾರ್(೨೫) ಮೃತ ದುರ್ದೈವಿಗಳು.
ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ದಡಗ ಕೆರೆಯಲ್ಲಿ ಹಸುಗಳಿಗೆ ನೀರು ಕುಡಿಸಲು ಹೋದ ವೇಳೆ ಮನು ಹಾಗೂ ಪುನೀತ್ ಇಬ್ಬರೂ ಒಟ್ಟಿಗೆ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಸಾವನಪ್ಪಿದ್ದಾರೆ.
ಒಂದೇ ಗ್ರಾಮದ ಇಬ್ಬರು ಮಕ್ಕಳು ನೀರು ಪಾಲಾಗಿರುದರಿಂದ ಇಡೀ ಗ್ರಾಮವೇ ನೀರವ ಮೌನಕ್ಕೆ ಜಾರಿದೆ. ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವಿಜಯ್ ಕುಮಾರ್(೨೫) ಕೆಲಸ ಮುಗಿದ ಬಳಿಕ ವಾಪಸ್ಸಾಗುವಾಗ ಸಂಜೆ 5 ಗಂಟೆ ಸಮಯದಲ್ಲಿ ಮದಲಹಳ್ಳಿಯ ಕೆರೆಯಲ್ಲಿ ಕೈ ಕಾಲು ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


