ಬೆಂಗಳೂರಿನಲ್ಲಿ ಮತ್ತೆ ಲಾಕ್'ಡೌನ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್'ಡೌನ್ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್'ಡೌನ್ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.
ಯಾವುದೇ ಕಾರಣಕ್ಕೂ ಬೆಂಗಳೂರಿನಲ್ಲಿ ಮತ್ತೊಮ್ಮೆ ಲಾಕ್ಡೌನ್ ಹೇರುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ನಡೆದ ತುರ್ತು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್'ಜಾರಿಗೊಳಿಸಿದರೆ ಶ್ರಮಿಕ ವರ್ಗಕ್ಕೆ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಬಡವರ್ಗದವರಿಂದ ಲಾಕ್'ಡೌನ್ ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾದ ಹಿನ್ನಲೆಯಲ್ಲಿ ಬಡವರ ಪರವಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾದೊಂದಿಗೆ ನಾವು ಮುಂದುವರಿಯಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಗುಣಮುಖರಾಗುತ್ತಿರುವ ಶೇಕಡಾವಾರು 61ರಷ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 4,000ದೊಳಗೇ ಇದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರಬಹುದು. ಆದರೆ. ಅದರ ಜೊತೆಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


