ರಾಜ್ಯದಲ್ಲಿ ಒಂದೇ ದಿನ 918 ಕೋವಿಡ್ ಪ್ರಕರಣಗಳು, ಬೆಂಗಳೂರು ಒಂದರಲ್ಲೇ 596 ಸೋಂಕಿತರು
ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 918 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 596 ಪ್ರಕರಣಗಳು ದೃಢಪಟ್ಟಿವೆ.

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 918 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 596 ಪ್ರಕರಣಗಳು ದೃಢಪಟ್ಟಿವೆ.
ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,923 ತಲುಪಿದೆ. ಕಳೆದ 24 ದಿನಗಳಲ್ಲಿ 11 ಮಂದಿ ಮೃತಪಟ್ಟಿದ್ದಾರೆ.
ಒಟ್ಟು 7287 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 195 ಮಂದಿ ಮೃತಪಟ್ಟಿದ್ದಾರೆ. ಸದ್ಯ 4441 ಸಕ್ರಿಯ ಪ್ರಕರಣಗಳಿದ್ದು, 197 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ಬೆಂಗಳೂರು ನಗರ -596, ದಕ್ಷಿಣ ಕನ್ನಡ -49, ಕಲಬುರಗಿ -33, ಬಳ್ಳಾರಿ -24, ಗದಗ -24, ಧಾರವಾಡ -19, ಬೀದರ್ -17,, ಉಡುಪಿ -14, ಹಾಸನ -14, ಕೋಲಾರ -14 ಯಾದಗಿರಿ, ಶಿವಮೊಗ್ಗ, ತುಮಕೂರು, ಚಾಮರಾಜನಗರ -13, ಮಂಡ್ಯ 12, ಮೈಸೂರು -12 ಪ್ರಕ್ರಣಗಳು ಬೆಳಕಿಗೆ ಬಂದಿದೆ.
ಕೊಡಗು 9, ರಾಯಚೂರು ಮತ್ತು ದಾವಣಗೆರೆ 6, ಬೆಂಗಳೂರು ಗ್ರಾಮಾಂತರ 5 ಪ್ರಕರಣಗಳು ವರದಿಯಾಗಿದೆ.
ಉತ್ತರಕನ್ನಡ, ಬಾಗಲಕೋಟೆ, ಚಿಕ್ಕಮಗಳೂರು, ಚಿತ್ರದುರ್ಗ ತಲಾ 2 ಬೆಳಗಾವಿ , ಚಿಕ್ಕಬಳ್ಳಾಪುರ , ಕೊಪ್ಪಳ ಮತ್ತು , ಹಾವೇರಿ ತಲಾ 1 ಕೇಸ್ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


