ಇಂದು ಎಸ್ಎಸ್ಎಲ್ ಸಿ ಎರಡನೇ ದಿನದ ಪರೀಕ್ಷೆ: ಕೇಂದ್ರಕ್ಕೆ ತೆರಳಿ ಶಿಕ್ಷಣ ಸಚಿವರಿಂದ ಪರಿಶೀಲನೆ
ಕೊರೋನಾ ಆತಂಕದ ನಡುವೆಯೇ ಶನಿವಾರ ಎಸ್ಎಸ್ಎಲ್ ಸಿ ಎರಡನೇ ಪರೀಕ್ಷೆ ಗಣಿತ ನಡೆಯುತ್ತಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದಂತೆ ಇಂದು ಕೂಡ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಸ್ಯಾನಿಟೈಸರ್ ಹಚ್ಚಿ ಸಿಬ್ಬಂದಿಗಳು ಕೊಠಡಿಗೆ ಕಳುಹಿಸಿದರು.

ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ಶನಿವಾರ ಎಸ್ಎಸ್ಎಲ್ ಸಿ ಎರಡನೇ ಪರೀಕ್ಷೆ ಗಣಿತ ನಡೆಯುತ್ತಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದಂತೆ ಇಂದು ಕೂಡ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಸ್ಯಾನಿಟೈಸರ್ ಹಚ್ಚಿ ಸಿಬ್ಬಂದಿಗಳು ಕೊಠಡಿಗೆ ಕಳುಹಿಸಿದರು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಬೇಕಾದ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ಹೋದ ದೃಶ್ಯ ಕಂಡುಬಂತು.
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಇಂದು ಸಹ ಪರೀಕ್ಷಾ ಕೇಂದ್ರಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆತ್ಮಸ್ಥೈರ್ಯ ತುಂಬಿದರು. ಪರೀಕ್ಷೆ ಬರೆಯುವ ಮಕ್ಕಳಿಗೆ ಕೇಂದ್ರಗಳಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು.
ಮೊದಲ ದಿನಕ್ಕಿಂತ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ನ್ನು ಕಡ್ಡಾಯವಾಗಿ ಧರಿಸಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸುತ್ತಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


