ರಾಜ್ಯ

ಚಿಕ್ಕಮಗಳೂರು: ಕಾರು ಪಲ್ಟಿ; ಇಬ್ಬರು ಪ್ರಯಾಣಿಕರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಸಂಭವಿಸಿದೆ.

ಚಿಕ್ಕಮಗಳೂರು: ಕಾರು ಪಲ್ಟಿ; ಇಬ್ಬರು ಪ್ರಯಾಣಿಕರ ಸಾವು
ಸಾಂದರ್ಭಿಕ ಚಿತ್ರ
Published On :

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಸಂಭವಿಸಿದೆ.

ಬೆಂಗಳೂರು ಮೂಲದ ಮಂಜುನಾಥ್(30) ಮುತ್ತು ರಾಜ್ (28) ಮೃತ ದುರ್ದೈವಿಗಳು. ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದಾಗ ಕರ್ತಿಕೆರೆ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.