ಕೋವಿಡ್ ಹೆಚ್ಚಳ ಹಿನ್ನೆಲೆ; ಜಯದೇವ ಆಸ್ಪತ್ರೆಯ ಹೊರರೋಗಿ ವಿಭಾಗ ಬಂದ್
ಬೆಂಗಳೂರು ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸ್ಪತ್ರೆಯ ಹೊರರೋಗಿ ವಿಭಾಗವನ್ನು ಜುಲೈ 4ರವರೆಗೆ ಮುಚ್ಚಲಾಗಿದೆ.

ಬೆಂಗಳೂರು: ಬೆಂಗಳೂರು ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸ್ಪತ್ರೆಯ ಹೊರರೋಗಿ ವಿಭಾಗವನ್ನು ಜುಲೈ 4ರವರೆಗೆ ಮುಚ್ಚಲಾಗಿದೆ.
ಕೆಲ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡುಬಂದಿದ್ದರಿಂದ, ಹೊರರೋಗಿ ವಿಭಾಗವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
ಆದರೆ, ತುರ್ತು ಸೇವೆಗಳು ದಿನದ 24 ಗಂಟೆಗಳು ತೆರೆದಿರಲಿದ್ದು, ಟೆಲಿಮೆಡಿಸಿನ್ ಕೂಡ ಲಭ್ಯವಿರಲಿದೆ. ತಪಾಸಣೆ ಅಗತ್ಯವಿರುವ ರೋಗಿಗಳು 080-22977400, 267, 433, 456ಗೆ ಕರೆ ಮಾಡಿ ಸಂಬಂಧಪಟ್ಟ ವೈದ್ಯರ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


