ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರಿಗೆ ಅಂತಿಮ ವಿದಾಯ; ಕಲಬುರಗಿಯಲ್ಲಿ ಅಂತ್ಯಕ್ರಿಯೆ
ಹಿರಿಯ ಸಾಹಿತಿ ನಾಡೋಜ ಗೀತಾ ನಾಗಭೂಷಣ ಅವರ ಅಂತ್ಯಸಂಸ್ಕಾರ ಇಂದು ನೇರವೇರಿತು.

ಕಲಬುರಗಿ: ಹಿರಿಯ ಸಾಹಿತಿ ನಾಡೋಜ ಗೀತಾ ನಾಗಭೂಷಣ ಅವರ ಅಂತ್ಯಸಂಸ್ಕಾರ ಇಂದು ನೇರವೇರಿತು.
ಕಲಬುರಗಿ ಹೊರವಲಯದ ಸಾವಳಗಿ - ಪಟ್ಟಣ ಕ್ರಾಸ್ ಬಳಿ ಇರುವ ಅವರ ಸ್ವಂತ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ನೆರವೇರಿತು.
ಹಿಂದೂ ಧರ್ಮದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬದ ಸದಸ್ಯರು, ಹಲವು ಸಾಹಿತಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಹಂಪಿ ವಿ.ವಿ.ಯ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದ ಗೀತಾ ನಾಗಭೂಷಣ, ವಯೋ ಸಹಜ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆರಾತ್ರಿ ನಿಧನರಾಗಿದ್ದರು.
ಕಲಬುರಗಿಯ ಸ್ವಸ್ತಿಕ್ ನಗರದ ಅವರ ಸ್ವಗೃಹದ ಬಳಿ ಪಾರ್ಥೀವ ಶರೀರದ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


