ಜುಲೈ ೨ರಿಂದ ಭಕ್ತರಿಗೆ ತೆರೆಯಲಿರುವ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠ
ಜುಲೈ ೨ ರಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ದರ್ಶನ ಕಲ್ಪಿಸಲು ನಿರ್ಧರಿಸಿರುವುದಾಗಿ ಶ್ರೀ ಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ ತಿಳಿಸಿದ್ದಾರೆ.

ಮಂತ್ರಾಲಯ: ಜುಲೈ ೨ ರಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ದರ್ಶನ ಕಲ್ಪಿಸಲು ನಿರ್ಧರಿಸಿರುವುದಾಗಿ ಶ್ರೀ ಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ ಹೇಳಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರ ಹಾಗೂ ಮುಜರಾಯಿ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಮಠದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ೧೦ ವರ್ಷದೊಳಗಿನ ಮಕ್ಕಳು, ೬೫ ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು, ಗರ್ಭಿಣಿಯರು, ಕಂಟೈನ್ ಮೆಂಟ್ ವಲಯಗಳಿಂದ ಬರುವ ಭಕ್ತರನ್ನು ಹೊರತುಪಡಿಸಿ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇವಾಲಯಕ್ಕೆ ಬರುವ ಭಕ್ತರಿಗೆ ಮೊದಲು ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ, ತಪಾಸಣೆ ನಡೆಸಿ ಕೋವಿಡ್ ಲಕ್ಷಣ ಇಲ್ಲದವರನ್ನು ಮಾತ್ರ ದೇಗಲ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಮಠದಲ್ಲಿ ಅನ್ನಸಂತರ್ಪಣೆ, ಪ್ರಸಾದ ವಿತರಣೆ ಇರುವುದಿಲ್ಲ. ಆರ್ಜಿತ ಸೇವೆಗಳನ್ನು ಪರೋಕ್ಷವಾಗಿ ನಡೆಸಲಾಗುವುದು ಭಕ್ತರಿಗೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಹಾಗೂ ಸಂಜೆ ೪ ರಿಂದ ೬ ರವರೆಗೆ ದರ್ಶನ ವ್ಯವಸ್ಥೆ ಕಲ್ಪಿಸಲಾಗುವುದು. ಮಠಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


