ಕೊರೋನಾ ವೈರಸ್: ಲಕ್ಷಣ ರಹಿತ ಸೋಂಕಿತರಿಗೆ ಪ್ರತ್ಯೇಕ ಕೋವಿಡ್-19 ಸೆಂಟರ್ ನಲ್ಲಿ ಚಿಕಿತ್ಸೆ!
ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಬೆಂಗಳೂರಿನಲ್ಲಿ ದಿನೇ ದಿನೇ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಲಕ್ಷಣ ರಹಿತ ಸೋಂಕಿತರಿಗೆ ಪ್ರತ್ಯೇಕ ಕೋವಿಡ್-19 ಸೆಂಟರ್ ನಲ್ಲಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಬೆಂಗಳೂರಿನಲ್ಲಿ ದಿನೇ ದಿನೇ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಲಕ್ಷಣ ರಹಿತ ಸೋಂಕಿತರಿಗೆ ಪ್ರತ್ಯೇಕ ಕೋವಿಡ್-19 ಸೆಂಟರ್ ನಲ್ಲಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಾರಕ ಕೊರೋನಾ ವೈರಸ್ ಕರ್ನಾಟಕದಲ್ಲಿ ನಿಧಾನವಾಗಿ ತನ್ನ ಕರಾಳ ಕದಂಬಬಾಹುವನ್ನು ಚಾಚುತ್ತಿದ್ದು, ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿದೆ. 10 ದಿನಗಳ ಹಿಂದೆ ನಗರದಲ್ಲಿ 100ರ ಆಸುಪಾಸಿನಲ್ಲಿದ್ದ ದಿನ ನಿತ್ಯದ ಸೋಂಕಿತರ ಪ್ರಮಾಣದ ಇದೀಗ ನಿತ್ಯ 500ರ ಗಡಿ ದಾಟಿಹೋಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ.
ಇದೇ ಕಾರಣಕ್ಕೆ ಸೋಂಕಿತರು ಕಂಡುಬರುವ ಪ್ರದೇಶಗಳನ್ನು ಸೀಲ್ ಡೌನ್ ಮಾಡಿ, ನಿಯಮಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿದೆ. ಇತ್ತ ಚಿಕಿತ್ಸೆಯಲ್ಲಿಯೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನುಕೈಗೊಳ್ಳುತ್ತಿರುವ ಸರ್ಕಾರ ಇದೀಗ ಕೊರೋನಾ ಸೋಂಕು ಚಿಕಿತ್ಸೆಗಾಗಿ ಮೂರು ವಿಭಾಗಗಳನ್ನುತೆರೆದಿದೆ. ಅದರಂತೆ ಲಕ್ಷಣ ರಹಿತ ಸೋಂಕಿತರಿಗೆ ಕೋವಿಡ್ ಆರೈಕೆ ಕೇಂದ್ರ (CCC) ಗಳಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದ್ದು, ಅತ್ಯಲ್ಪ ಪ್ರಮಾಣದಿಂದ ಮಧ್ಯಮ ಪ್ರಮಾಣದ ಸೋಂಕು ಲಕ್ಷಣಗಳಿರುವ ಸೋಂಕಿತರಿಗೆ ಮೀಸಲಾದ ಕೋವಿಡ್ ಆರೋಗ್ಯ ಕೇಂದ್ರ (DCHC-Dedicated Covid-19 Helth Care Centre) ಮತ್ತು ಗಂಭೀರವಾಗಿರುವ ರೋಗಿಗಳನ್ನು ಮೀಸಲಾದ ಕೋವಿಡ್-19 ಆಸ್ಪತ್ರೆಗಳಲ್ಲಿ ನಿರ್ವಹಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದು, 'ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಕೋವಿಡ್ ಆರೈಕೆ ಕೇಂದ್ರ (CCC) ಗಳನ್ನು ಹೆಚ್ಚಿಸುವ ಅಗತ್ಯವಿದ್ದು, ಸೋಂಕು ಲಕ್ಷಣ ರಹಿತ ವ್ಯಕ್ತಿಗಳನ್ನು ಇಲ್ಲಿ ನೋಡಿಕೊಳ್ಳಲಾಗುತ್ತದೆ. ಒಟ್ಟು 1,600 ಹಾಸಿಗೆಗಳ ಹೆಚ್ಚಿನ ಸೌಕರ್ಯ ಕಲ್ಪಿಸಲು 5 ಸಂಸ್ಥೆಗಳನ್ನು CCC ಗಳನ್ನಾಗಿ ರಾಜ್ಯಸರ್ಕಾರ ಅಧಿಸೂಚಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


